Jeremiah 13:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದಲ್ಲಿ ದುಷ್ಟರೂ ಗರ್ವಿಷ್ಠರೂ ಆಗಿರುವ ಜನರನ್ನು ಹಾಳುಮಾಡುವೆನು. ಅವರು ನನ್ನ ಸಂದೇಶವನ್ನು ಕೇಳುವುದಿಲ್ಲ. ಅವರು ಹಟಮಾರಿಗಳೂ ತಮ್ಮ ಮನಸ್ಸಿಗೆ ಘಂದಂತೆ ಮಾಡುವವರೂ ಆಗಿದ್ದಾರೆ. ಅವರು ಬೇರೆ ದೇವರುಗಳನ್ನು ಅನುಸರಿಸುತ್ತಾರೆ ಮತ್ತು ಪೂಜಿಸುತ್ತಾರೆ. ಯೆಹೂದದ ಜನರು ಈ ನಾರಿನ ನಡುಪಟ್ಟಿಯಂತೆ ಆಗುವರು. ಅವರು ಹಾಳಾಗಿ ನಿಷ್ಪ್ರಯೋಜಕರಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಮಾನವಾಗಿರುವರು.
Kannada BSI Bible 2016
ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ, ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಹಟದಂತೆ ನಡೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.
Kannada Bible (KNCL) BSI 2016
ಈ ದುಷ್ಟಜನರು ನನ್ನ ಮಾತುಗಳನ್ನು ಕೇಳಲೊಲ್ಲರು. ತಮ್ಮ ಹೃದಯದ ಒರಟುತನದಂತೆ ನಡೆದುಬರುತ್ತಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸಿ, ಪೂಜಿಸುತ್ತಿದ್ದಾರೆ. ಇವರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡೆದುಕೊಂಡು, ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಅವುಗಳನ್ನು ಆರಾಧಿಸುವುದಕ್ಕೂ ಹಿಂಬಾಲಿಸುವ ಈ ದುಷ್ಟಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.