Jeremiah 13:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆರೆಮೀಯನೇ, ಯೆಹೂದದ ಜನರಿಗೆ, ‘ಇಸ್ರೇಲಿನ ದೇವರಾದ ಯೆಹೋವನು ಪ್ರತಿಯೊಂದು ಚರ್ಮದ ಬುದ್ದಲಿಯು ದ್ರಾಕ್ಷಾರಸದಿಂದ ತುಂಬಿರಙೇಕು ಎಂದು ಹೇಳುತ್ತಾನೆ’ ಎಂದು ಹೇಳು. ಆಗ ಆ ಜನರು ನಕ್ಕು, ‘ಪ್ರತಿಯೊಂದು ಚರ್ಮದ ಬುದ್ದಲಿಯು ದ್ರಾಕ್ಷಾರಸದಿಂದ ತುಂಬಿರಙೇಕೆಂಬುದು ನಮಗೆ ಚೆನ್ನಾಗಿ ಗೊತ್ತು’ ಎಂದು ನಿನಗೆ ಹೇಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಹೀಗಿರಲು ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ಹೇಳುವ ಮಾತನ್ನು ಕೇಳಿರಿ ಎಂದು ನೀನು ಅವರಿಗೆ ಸಾರು; ಆಗ ಅವರು ನಿನಗೆ, “ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು ನಮಗೆ ಗೊತ್ತಿಲ್ಲವೋ” ಎಂದು ಹೇಳುವರು.
Kannada BSI Bible 2016
ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವದು ಎಂಬದಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ಹೇಳುವ ಮಾತನ್ನು ಕೇಳಿರಿ ಎಂದು ನೀನು ಅವರಿಗೆ ಸಾರು; ಆಗ ಅವರು ನಿನಗೆ - ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವದು ನಮಗೆ ಗೊತ್ತಿಲ್ಲವೋ ಎಂದು ಹೇಳುವರು.
Kannada Bible (KNCL) BSI 2016
“ಯೆರೆಮೀಯನೇ, ನೀನು ಅವರಿಗೆ ಹೀಗೆಂದು ಸಾರು: ಇಸ್ರಯೇಲಿನ ದೇವರಾದ ಸರ್ವೇಶ್ವರ ಸ್ವಾಮಿಯ ಸಂದೇಶವನ್ನು ಕೇಳಿ - ‘ಪ್ರತಿಯೊಂದು ಕುಡಿಕೆಯು ದ್ರಾಕ್ಷಾರಸದಿಂದ ತುಂಬಿರುವುದು.’ ಆಗ ಅವರು ನಿನಗೆ - ‘ಪ್ರತಿಯೊಂದು ಕುಡಿಕೆ ದ್ರಾಕ್ಷಾರಸದಿಂದ ತುಂಬಿರುವುದು ಎಂಬುದು ನಮಗೆ ಗೊತ್ತಿಲ್ಲವೆ?’ ಎಂದು ಹೇಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು: ‘ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಗಡಿಗೆಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವುವು. ಆಗ ಅವರು ನಿನಗೆ ಗಡಿಗೆಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವುವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ,’ ಎಂದು ನಿನಗೆ ಹೇಳುವರು.