Jeremiah 13:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದದ ಜನರು ಎಡವಿ, ಒಬ್ಬರಮೇಲೊಬ್ಬರು ಬೀಳುವಂತೆ ನಾನು ಮಾಡುವೆನು. ತಂದೆ ಮತ್ತು ಮಕ್ಕಳು ಒಬ್ಬರಮೇಲೊಬ್ಬರು ಬೀಳುವರು.”‘ ಇದು ಯೆಹೋವನ ನುಡಿ. ‘“ನಾನು ಅವರಿಗಾಗಿ ಕನಿಕರಪಡುವದಿಲ್ಲ ಅಥವಾ ಕರುಣೆ ತೋರಿಸುವದಿಲ್ಲ. ಯೆಹೂದದ ಜನರ ವಿನಾಶವನ್ನು ಕರುಣೆಯು ತಡೆಯದಂತೆ ನೋಡಿಕೊಳ್ಳುತ್ತೇನೆ.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ.
Kannada BSI Bible 2016
ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು; ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು; ಇದು ಯೆಹೋವನ ನುಡಿ.
Kannada Bible (KNCL) BSI 2016
ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ಹಾಗು ನಾಶಮಾಡದೆ ಬಿಡೆನು,’ ಇದು ಸರ್ವೇಶ್ವರನಾದ ನನ್ನ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು ಹಾಗೂ ನಾಶಮಾಡದೆ ಬಿಡೆನು,’ ಇದು ಯೆಹೋವ ದೇವರಾದ ನನ್ನ ನುಡಿ.”