Jeremiah 13:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ಜನರಾದ ನೀವು ಯೆಹೋವನ ಮಾತನ್ನು ಕೇಳದಿದ್ದರೆ, ನಾನು ಗುಟ್ಟಾದ ಸ್ಥಳದಲ್ಲಿ ಅಳುವೆನು. ನಿಮ್ಮ ಅಹಂಕಾರವು ನನ್ನನ್ನು ಅಳುವ ಹಾಗೆ ಮಾಡುವುದು. ನಾನು ಘಹಳ ಗಟ್ಟಿಯಾಗಿ ಅಳುವೆನು, ನನ್ನ ಕಣ್ಣುಗಳಿಂದ ಕಣ್ಣೀರು ಹೊರಸೂಸುವುದು. ಏಕೆಂದರೆ ಯೆಹೋವನ ಮಂದೆಯು ಸೆರೆಹಿಡಿಯಲ್ಪಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.
Kannada BSI Bible 2016
ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿವಿುತ್ತ ಗೋಳಾಡುವದು; ಯೆಹೋವನ ಮಂದೆಯು ಸೆರೆಯಾಗಿ ಹೋದದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವದು.
Kannada Bible (KNCL) BSI 2016
ನೀವು ಕಿವಿಗೊಡದಿದ್ದರೆ ನಿಮ್ಮ ಗರ್ವದ ನಿಮಿತ್ತ ನನ್ನ ಮನ ಗೋಳಾಡುವುದು ಗುಟ್ಟಾಗಿ. ನೀವು ಸೆರೆಯಾಗಿ ಹೋಗುವುದರಿಂದ ಅಳುವೆನು ಸರ್ವೇಶ್ವರನ ಮುಂದೆ ಬಹಳವಾಗಿ. ನನ್ನ ಕಣ್ಣುಗಳಿಂದ ಕಂಬನಿ ಹರಿವುದು ಧಾರಾಕಾರವಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಕೇಳದಿದ್ದರೆ, ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು, ಯೆಹೋವ ದೇವರ ಮಂದೆಯು ಸೆರೆಯಾಗಿ ಹೋದದ್ದರಿಂದ ಬಹಳವಾಗಿ ಅಳುವೆನು. ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.