Jeremiah 13:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಸಂಗತಿಗಳನ್ನು ರಾಜನಿಗೂ ರಾಣಿಗೂ ಹೇಳಿರಿ: “ನಿಮ್ಮ ಸಿಂಹಾಸನಗಳಿಂದ ಕೆಳಗಿಳಿದು ಬನ್ನಿ. ನಿಮ್ಮ ಸುಂದರವಾದ ಕಿರೀಟಗಳು ನಿಮ್ಮ ತಲೆಯಿಂದ ಉರುಳಿ ಕೆಳಗೆ ಬಿದ್ದಿವೆ” ಎಂದು ಹೇಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ.
Kannada BSI Bible 2016
ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜನಿಗೂ ರಾಜಮಾತೆಗೂ - ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ ಎಂದು ಹೇಳಿರಿ.
Kannada Bible (KNCL) BSI 2016
ಸರ್ವೇಶ್ವರ ನನಗೆ ಹೀಗೆಂದರು: “ರಾಜನಿಗೂ ರಾಜಮಾತೆಗೂ ಈ ವರ್ತಮಾನವನ್ನು ತಿಳಿಸು - ‘ನೀವು ಇಳಿದುಬಂದು ನೆಲದಲ್ಲಿ ಕುಳಿತುಕೊಳ್ಳಿ. ನಿಮ್ಮ ಚೆಲುವಾದ ಕಿರೀಟ ಬಿದ್ದುಹೋಗಿದೆ ತಲೆಯಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾಜನಿಗೂ ರಾಜಮಾತೆಗೂ ಹೀಗೆ ಹೇಳಿರಿ, “ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ.”