Jeremiah 13:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮೇ, ಮುಖವೆತ್ತಿ ನೋಡು. ಉತ್ತರ ದಿಕ್ಕಿನಿಂದ ಬರುವ ಶತ್ರುಗಳನ್ನು ನೋಡು. ನಿನ್ನ ಮಂದೆ ಎಲ್ಲಿದೆ? ದೇವರು ನಿನಗೆ ಆ ಸುಂದರವಾದ ಮಂದೆಯನ್ನು ದಯಪಾಲಿಸಿದನು. ನೀನು ಆ ಮಂದೆಯನ್ನು ನೋಡಿಕೊಳ್ಳಙೇಕಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು. ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡೂ ಎಲ್ಲಿ?
Kannada BSI Bible 2016
ಓ ಕರ್ತನೇ, ನಮ್ಮ ದುಷ್ಟತ್ವವನ್ನೂ ನಮ್ಮ ತಂದೆಗಳ ಅಕ್ರಮವನ್ನೂ ನಾವು ಅರಿಕೆ ಮಾಡುತ್ತೇವೆ. ನಿನಗೆ ವಿರೋಧವಾಗಿ ನಾವು ಪಾಪ ಮಾಡಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
[ಚೀಯೋನೇ] ಕಣ್ಣೆತ್ತು, ಬಡಗಲಿಂದ ಬರುವವರನ್ನು ನೋಡು; ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡು ಎಲ್ಲಿ?
Kannada Bible (KNCL) BSI 2016
“ಜೆರುಸಲೇಮ್, ಕಣ್ಣೆತ್ತಿ ನೋಡು, ಉತ್ತರದಿಂದ ಬರುವವರನ್ನು ನೋಡು. ನಿನಗೆ ಒಪ್ಪಿಸಿದ ಹಿಂಡು, ಅಂದವಾದ ಆ ನಿನ್ನ ಹಿಂಡು ಎಲ್ಲಿ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು, ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡು ಎಲ್ಲಿ?