Jeremiah 13:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ನಿನಗೆ ಆ ಮಂದೆಯ ಲೆಕ್ಕವನೊಐಪ್ಪಿಸು ಎಂದು ಕೇಳಿದರೆ ಏನು ಹೇಳುವೆ? ಜನರಿಗೆ ದೇವರ ಬಗ್ಗೆ ತಿಳಿಸುವದು ನಿನ್ನ ಕರ್ತವ್ಯವಾಗಿತ್ತು. ನಿನ್ನ ನಾಯಕರು ಜನರಿಗೆ ಮಾರ್ಗದರ್ಶನ ಮಾಡಙೇಕಾಗಿತ್ತು. ಆದರೆ ಅವರು ತಮ್ಮ ಕೆಲಸವನ್ನು ಮಾಡಲಿಲ್ಲ. ಆದ್ದರಿಂದ ನಿನಗೆ ಹೆಚ್ಚಿನ ನೋವು ಮತ್ತು ಕಷ್ಟಗಳು ಉಂಟಾಗುವವು. ಪ್ರಸವವೇದನೆಯಂಥ ನೋವು ನಿನಗಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನೊಡನೆ ಗೆಳೆಯರಂತೆ ಬಾಳಲು ನೀನು ಅಭ್ಯಾಸಮಾಡಿಸಿದವರನ್ನು ಯೆಹೋವನು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವುದಲ್ಲವೇ.
Kannada BSI Bible 2016
ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ.ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನಲ್ಲಿ ಬಳಿಕೆಗೊಳ್ಳುವಂತೆ ನೀನು ಅಭ್ಯಾಸಮಾಡಿಸಿದವರನ್ನು [ಯೆಹೋವನು] ನಿನಗೆ ತಲೆಯಾಗಿ ನೇವಿುಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವದಲ್ಲವೆ.
Kannada Bible (KNCL) BSI 2016
ನಿನ್ನೊಡನೆ ಗೆಳೆಯರಂತೆ ಬಾಳಲು ನೀನೇ ಪಳಗಿಸಿದವರನ್ನು ನಿನಗೆ ಒಡೆಯರನ್ನಾಗಿ ನಾನು ನೇಮಿಸುವಾಗ ಏನು ಹೇಳುವೆ? ಹೆರುವವಳಿಗೆ ಬರುವಂಥ ವೇದನೆ ಆಗ ನಿನಗೆ ಬರದೆ ಇರುವುದೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ವಿಶೇಷ ಮಿತ್ರರಾಗಿ ನೀವು ಬೆಳೆಸಿದವರನ್ನು ಯೆಹೋವ ದೇವರು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳೋ ಎಂಬಂತೆ ಹಿಡಿಯುವುದಲ್ಲವೆ?