Jeremiah 13:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಂಥ ಕೇಡು ನನಗೆ ಏಕೆ ಉಂಟಾಯಿತು?” ಎಂದು ನಿನ್ನನ್ನು ನೀನೇ ಕೇಳಿಕೊಳ್ಳಘಹುದು. ನೀನು ಮಾಡಿದ ಅನೇಕ ಪಾಪಗಳ ಫಲದಿಂದಲೇ ಆಯಿತು. ನಿನ್ನ ಪಾಪಗಳ ಫಲವಾಗಿ ನಿನ್ನ ಲಂಗವನ್ನು ಹರಿಯಲಾಯಿತು. ನಿನ್ನ ಪಾದರಕ್ಷೆಯನ್ನು ಕಿತ್ತುಕೊಳ್ಳಲಾಯಿತು. ನಿನ್ನನ್ನು ಕಂಗೆಡಿಸುವದಕ್ಕಾಗಿ ಅವರು ಹೀಗೆ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.
Kannada BSI Bible 2016
ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವು ನನಗೆ ಏಕೆ ಸಂಭವಿಸಿದವು ಎಂದು ನೀನು ಮನದೊಳಗೆ ಅಂದುಕೊಂಡರೆ ನಿನ್ನ ನೆರಿಗೆಯು ಕೀಳಲ್ಪಟ್ಟು ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವದು.
Kannada Bible (KNCL) BSI 2016
ಇವು ನನಗೇಕೆ ಸಂಭವಿಸಿದವು ಎಂದು ಮನದೊಳಗೇ ನೀನು ಅಂದುಕೊಳ್ಳುವೆ. ನೀನು ಮಾಡಿದುದು ಮಹಾಪಾಪ! ಆದ್ದರಿಂದ ನಿನ್ನ ಉಡುಗೆಯನ್ನೇ ಕೀಳಲಾಗುವುದು. ನೀನು ಅತ್ಯಾಚಾರಕ್ಕೆ ಈಡಾಗುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ವೇಳೆ, “ಇವು ನನಗೆ ಏಕೆ ಸಂಭವಿಸಿದವು?” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ನೆರಿಗೆಯು ಕೀಳಲಾಗುವುದು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.