Jeremiah 13:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆ ಹೇಳಿದನು, “ನಡುಪಟ್ಟಿಯು ಹಾಳಾಗಿ ನಿಷ್ಪ್ರಯೋಜಕವಾಗಿದೆ. ಅಂತೆಯೇ ನಾನು ಯೆಹೂದದ ಮತ್ತು ಜೆರುಸಲೇಮಿನ ಜಂಘದ ಜನರನ್ನು ಹಾಳುಮಾಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇದು ಯೆಹೋವನಾದ ನನ್ನ ನುಡಿ, ಈ ನಡುಕಟ್ಟಿನಂತೆ ನಾನು ಯೆಹೂದದ ದೊಡ್ಡಸ್ತಿಕೆಯನ್ನೂ ಮತ್ತು ಯೆರೂಸಲೇಮಿನ ಬಲು ದೊಡ್ಡಸ್ತಿಕೆಯನ್ನೂ ಕೆಡಿಸಿಬಿಡುವೆನು.
Kannada BSI Bible 2016
ನೀನು ಯಾಕೆ ಗಾಬರಿಪಡುವ ಮನುಷ್ಯನ ಹಾಗೆಯೂ ರಕ್ಷಿಸಲಾರದ ಪರಾಕ್ರಮಶಾಲಿಯ ಹಾಗೆಯೂ ಇರಬೇಕು? ಆದರೂ ನೀನು, ಓ ಕರ್ತನೇ, ನಮ್ಮ ಮಧ್ಯದಲ್ಲಿ ಇದ್ದೀ, ನಿನ್ನ ಹೆಸರಿನಿಂದ ನಾವು ಕರೆಯಲ್ಪಟ್ಟಿದ್ದೇವೆ; ನಮ್ಮನ್ನು ಕೈ ಬಿಡಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದು ಯೆಹೋವನಾದ ನನ್ನ ನುಡಿ - ಇದೇ ಪ್ರಕಾರವಾಗಿ ನಾನು ಯೆಹೂದದ ದೊಡ್ಡಸ್ತಿಕೆಯನ್ನೂ ಯೆರೂಸಲೇವಿುನ ಬಲು ದೊಡ್ಡಸ್ತಿಕೆಯನ್ನೂ ಕೆಡಿಸಿಬಿಡುವೆನು.
Kannada Bible (KNCL) BSI 2016
“ಇದು ಸರ್ವೇಶ್ವರನಾದ ನನ್ನ ನುಡಿ - ಈ ಪ್ರಕಾರವಾಗಿಯೇ ನಾನು ಜುದೇಯದ ದೊಡ್ಡಸ್ತಿಕೆಯನ್ನು ಹಾಗು ಜೆರುಸಲೇಮಿನ ಘನವಾದ ದೊಡ್ಡಸ್ತಿಕೆಯನ್ನು ತೆಗೆದುಬಿಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಈ ಪ್ರಕಾರ ನಾನು ಯೆಹೂದದ ಗರ್ವವನ್ನೂ, ಯೆರೂಸಲೇಮಿನ ಮಹಾ ಗರ್ವವನ್ನು ಕೆಡಿಸುವೆನು.