Jeremiah 14:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ಜನರ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: “ಯೆಹೂದದ ಜನರು ನನ್ನಿದ ದೂರವಾಗಲು ಮನಃಪೂರ್ವಕವಾಗಿ ಇಚ್ಛಿಸುತ್ತಾರೆ. ಅವರು ಮೊದಲಿಂದಲೂ ಹೀಗೆ ಮಾಡುತ್ತಲೇ ಇದ್ದಾರೆ. ಆದ್ದರಿಂದ ಈಗ ಯೆಹೋವನು ಅವರನ್ನು ಸಿಬಕರಿಸುವದಿಲ್ಲ. ಆತನು ಅವರ ದುಷ್ಕೃತ್ಯಗಳನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗಾಗಿ ಅವರನ್ನು ದಂಡಿಸುತ್ತಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಈ ಜನರನ್ನು ಕುರಿತು, “ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ. ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು” ಎಂದು ಹೇಳಿದ್ದಾನೆ.
Kannada BSI Bible 2016
ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಈ ಜನರನ್ನು ಕುರಿತು - ಇವರು [ನನ್ನನ್ನು ಪ್ರಯಾಣಿಕನು ಎಂದ] ಹಾಗೆಯೇ ಅಲೆಯುವದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ; ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು ಎಂದು ಹೇಳಿದ್ದಾನೆ.
Kannada Bible (KNCL) BSI 2016
ಈ ಜನರನ್ನು ಕುರಿತು ಸರ್ವೇಶ್ವರ ನನಗೆ ಹೇಳಿದ ಮಾತುಗಳು: “ಇವರು ಅಲೆದಾಡಲು ಇಷ್ಟಪಡುವ ಜನರು. ತಮ್ಮ ಕಾಲಿನ ಮೇಲೆ ಹತೋಟಿಯಿಲ್ಲದವರು. ಆದಕಾರಣ ಸರ್ವೇಶ್ವರನಾದ ನಾನು ಇವರನ್ನು ಕರುಣೆಯಿಂದ ನೋಡುವುದಿಲ್ಲ. ಇದೀಗಲೆ ಇವರ ಅಪರಾಧಗಳನ್ನು ನೆನಪಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಈ ಜನರಿಗೆ ಹೀಗೆ ಹೇಳುತ್ತಾರೆ: “ಹೀಗೆ ತಿರುಗಾಡುವುದಕ್ಕೆ ಅವರು ಇಷ್ಟಪಡುತ್ತಾರೆ. ತಮ್ಮ ಕಾಲುಗಳನ್ನು ಹಿಂದೆಗೆಯುವುದಿಲ್ಲ. ಆದ್ದರಿಂದ ಯೆಹೋವ ದೇವರು ಅವರನ್ನು ಅಂಗೀಕರಿಸುವುದಿಲ್ಲ. ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವೆನು. ಅವರ ಪಾಪಗಳಿಗಾಗಿ ಅವರನ್ನು ದಂಡಿಸುವೆನು.”