Jeremiah 14:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಘಹುದು ಮತ್ತು ನನಗೆ ಪ್ರಾರ್ಥನೆ ಮಾಡಘಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸಿಬಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಊಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.
Kannada BSI Bible 2016
ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಉಪವಾಸ ಮಾಡುವಾಗ ಇವರ ಮೊರೆಯನ್ನು ಕೇಳೆನು; ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು; ಖಡ್ಗ ಕ್ಷಾಮ ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು ಎಂದು ಹೇಳಿದನು.
Kannada Bible (KNCL) BSI 2016
ಇವರು ಉಪವಾಸ ಕೈಗೊಂಡರೂ ಇವರ ಮೊರೆಯನ್ನು ನಾನು ಕೇಳುವುದಿಲ್ಲ. ದಹನಬಲಿಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸುವುದಿಲ್ಲ. ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಇವರನ್ನು ಮುಗಿಸಿಬಿಡುತ್ತೇನೆ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು.