Jeremiah 14:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಹೆಸರಿನಲ್ಲಿ ಬೋಧನೆ ಮಾಡುತ್ತಿರುವ ಈ ಪ್ರವಾದಿಗಳ ಬಗ್ಗೆ ನಾನು ಹೇಳುವದು ಇಷ್ಟೇ. ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಆ ಪ್ರವಾದಿಗಳು ‘ಶತ್ರುಗಳು ಖಡ್ಗಧಾರಿಗಳಾಗಿ ಎಂದಿಗೂ ಈ ದೇಶದ ಮೇಲೆ ಧಾಳಿ ಮಾಡುವದಿಲ್ಲ. ಈ ದೇಶದಲ್ಲಿ ಎಂದೂ ಕ್ಷಾಮ ಕಾಣಿಸಿಕೊಳ್ಳುವದಿಲ್ಲ’ ಎಂದು ಹೇಳಿದ್ದಾರೆ. ಆದರೆ ಆ ಪ್ರವಾದಿಗಳು ಹಸಿವಿನ ತಾಪದಿಂದ ಸಾಯುತ್ತಾರೆ ಮತ್ತು ಶತ್ರುವಿನ ಖಡ್ಗ ಅವರನ್ನು ಕೊಲ್ಲುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ.
Kannada BSI Bible 2016
ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು - ಖಡ್ಗದಿಂದಲೂ ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು ಎಂದು ಹೇಳುತ್ತೇನೆ.
Kannada Bible (KNCL) BSI 2016
ಆದುದರಿಂದ ನನ್ನ ಅಪ್ಪಣೆಯಿಲ್ಲದೆ, ನನ್ನ ಹೆಸರೆತ್ತಿ, ಪ್ರವಾದನೆ ಮಾಡುತ್ತಾ ಖಡ್ಗವಾಗಲಿ, ಕ್ಷಾಮವಾಗಲಿ ಈ ನಾಡಿಗೆ ಬರುವುದಿಲ್ಲ ಎಂದು ಬೋಧಿಸುತ್ತಿದ್ದಾರಲ್ಲವೆ? ಆ ಪ್ರವಾದಿಗಳ ವಿಷಯದಲ್ಲಿ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ - ಖಡ್ಗದಿಂದಲೆ, ಕ್ಷಾಮದಿಂದಲೆ ಆ ಪ್ರವಾದಿಗಳು ನಾಶವಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೋವ ದೇವರು ತಾನು ಕಳುಹಿಸದೆ, ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು, ‘ಈ ದೇಶದಲ್ಲಿ ಖಡ್ಗವೂ ಬರವೂ ಇರುವುದಿಲ್ಲ,’ ಎಂದು ಹೇಳುವಂಥ ಪ್ರವಾದಿಗಳನ್ನು ಕುರಿತು, ಖಡ್ಗದಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.