Jeremiah 14:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾರಿಗೆ ಪ್ರವಾದಿಗಳು ಬೋಧನೆ ಮಾಡಿದ್ದರೋ ಅವರನ್ನು ಬೀದಿಗಳಲ್ಲಿ ಎಸೆಯಲಾಗುವದು. ಆ ಜನರು ಹಸಿವಿನಿಂದ ಮತ್ತು ಶತ್ರುಗಳ ಖಡ್ಗಗಳಿಂದ ಮಡಿಯುವರು. ಆ ಜನರನ್ನೂ ಅವರ ಹೆಂಡತಿಯರನ್ನೂ ಮಕ್ಕಳನ್ನೂ ಹೂಣಿಡುವದಕ್ಕೆ ಯಾರೂ ಇರುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮ ಮತ್ತು ಖಡ್ಗಗಳ ದೆಸೆಯಿಂದ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡತಿ ಮತ್ತು ಮಕ್ಕಳನ್ನೂ ಹೂಣಿಡುವುದಕ್ಕೆ ಯಾರೂ ಇರುವುದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.
Kannada BSI Bible 2016
ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮಖಡ್ಗಗಳ ದೆಸೆಯಿಂದ ಯೆರೂಸಲೇವಿುನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡರುಮಕ್ಕಳನ್ನೂ ಹೂಣಿಡುವದಕ್ಕೆ ಯಾರೂ ಇರುವದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.
Kannada Bible (KNCL) BSI 2016
ಅವರ ಪ್ರವಾದನೆಗೆ ಕಿವಿಗೊಡುವ ಜನರು ಕೂಡ ಕ್ಷಾಮಖಡ್ಗಗಳಿಗೆ ತುತ್ತಾಗುವರು. ಜೆರುಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು. ಅವರನ್ನೂ ಅವರ ಮಡದಿ ಮಕ್ಕಳನ್ನೂ ಹೂಣಲು ಸಹ ಯಾರೂ ಇರುವುದಿಲ್ಲ. ಅವರ ದುಷ್ಟತನವನ್ನು ಅವರ ಮೇಲೆಯೆ ಸುರಿದುಬಿಡುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಪ್ರವಾದಿಸುವ ಜನರು ಕ್ಷಾಮದ ಮತ್ತು ಖಡ್ಗದ ನಿಮಿತ್ತ ಯೆರೂಸಲೇಮಿನ ಬೀದಿಪಾಲಾಗುವರು. ಅವರನ್ನೂ, ಅವರ ಹೆಂಡತಿಯರನ್ನೂ, ಅವರ ಪುತ್ರಪುತ್ರಿಯರನ್ನೂ ಹೂಳಿಡುವುದಕ್ಕೆ ಯಾರೂ ಇರುವುದಿಲ್ಲ. ಏಕೆಂದರೆ ಅವರಿಗೆ ಅರ್ಹವಾದ ಆಪತ್ತನ್ನು ನಾನು ಅವರ ಮೇಲೆ ಸುರಿಯುತ್ತೇನೆ.