Jeremiah 14:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆರೆಮೀಯನೇ, ಯೆಹೂದದ ಜನರಿಗೆ ಈ ಸಂದೇಶವನ್ನು ಹೇಳು: ‘ನನ್ನ ಕಣ್ಣುಗಳಲ್ಲಿ ಕಣ್ಣೀರು ತುಂಬಿಕೊಂಡಿದೆ. ನಾನು ನಿರಂತರವಾಗಿ ಹಗಲಿರುಳು ಅಳುವೆನು. ನಾನು ನನ್ನ ಕನ್ಯೆಯಾದ ಮಗಳಿಗಾಗಿ ಅಳುವೆನು. ನಾನು ನನ್ನ ಜನರಿಗಾಗಿ ಅಳುವೆನು. ಏಕೆಂದರೆ ಯಾರೋ ಒಬ್ಬರು ಅವರನ್ನು ಹೊಡೆದು ಸದೆಘಡಿದಿದ್ದಾರೆ, ಅವರಿಗೆ ಘಹಳ ಗಾಯಗಳಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.
Kannada BSI Bible 2016
ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಈ ಮಾತನ್ನು ಅವರಿಗೆ ಹೇಳು - ನನ್ನ ಕಣ್ಣೀರು ರಾತ್ರೀಹಗಲು ನಿರಂತರ ಸುರಿಯಲಿ; ಏಕಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟುಬಿತ್ತು.
Kannada Bible (KNCL) BSI 2016
“ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ‘ರಾತ್ರಿಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು. “ ‘ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ. ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ಏಟಿನಿಂದಲೂ, ದೊಡ್ಡ ಪೆಟ್ಟಿನಿಂದಲೂ ಗಾಯಗೊಂಡಿದ್ದಾಳೆ.