Jeremiah 14:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಗರಗಳ ಹೊರಗಡೆ ಹೋದರೆ ಖಡ್ಗಗಳಿಗೆ ಆಹುತಿಯಾಗಿ ಸತ್ತವರು ನನ್ನ ಕಣ್ಣಿಗೆ ಬೀಳುತ್ತಾರೆ. ನಾನು ನಗರಗಳಲ್ಲಿ ಹೋದರೆ ಕ್ಷಾಮದಿಂದ ಘಳಲುವ ಜನರು ನನ್ನ ಕಣ್ಣಿಗೆ ಬೀಳುತ್ತಾರೆ. ಅವರಿಗೆ ತಿನ್ನಲು ಅನ್ನವಿಲ್ಲ. ಯಾಜಕರನ್ನು ಮತ್ತು ಪ್ರವಾದಿಗಳನ್ನು ಪರದೇಶಕ್ಕೆ ತೆಗೆದುಕೊಂಡು ಹೋಗಲಾಗಿದೆ.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.
Kannada BSI Bible 2016
ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಊರಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು; ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ.
Kannada Bible (KNCL) BSI 2016
ಊರುಬಿಟ್ಟು ಹೊರಗೆ ಹೋದರೆ ಅಲ್ಲಿ ಕಾಣಿಸುತ್ತಾರೆ ಖಡ್ಗದಿಂದ ಸತ್ತವರು. ಊರ ಒಳಗೆ ಬಂದರೆ ಅಲ್ಲಿ ಕಾಣಿಸುತ್ತಾರೆ ಕ್ಷಾಮದಿಂದ ನರಳುವವರು. ಅಪರಿಚಿತನಾಡಿಗೆ ಗಡೀಪಾರಾಗಿದ್ದಾರೆ ಪ್ರವಾದಿಗಳು ಮತ್ತು ಯಾಜಕರು’.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಹೊಲಕ್ಕೆ ಹೋದರೆ ಇಗೋ, ಖಡ್ಗದಿಂದ ಸತ್ತವರು ಕಾಣಿಸುತ್ತಾರೆ. ಪಟ್ಟಣದಲ್ಲಿ ಪ್ರವೇಶಿಸಿದರೆ ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು ಕಾಣಿಸಿಕೊಳ್ಳುತ್ತಾರೆ. ಹೌದು, ಪ್ರವಾದಿಯೂ, ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.’ ”