Jeremiah 14:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನ್ನು ದೆಬಷೀಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಘಂದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನನ್ನು ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದಿಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮ ಕಾಲವನ್ನೂ ಎದುರುನೋಡಿದೆವು, ಹಾ, ಅಂಜಿಕೆಯೇ!
Kannada BSI Bible 2016
ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!
Kannada Bible (KNCL) BSI 2016
“ಸ್ವಾಮೀ, ನೀವು ಜುದೇಯವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರೊ? ಸಿಯೋನಿನ ಬಗ್ಗೆ ನಿಮಗೆ ಮನಃಪೂರ್ವಕವಾದ ಅಸಹ್ಯ ಹುಟ್ಟಿದೆಯೊ? ಗುಣವಾಗದಂಥ ಪೆಟ್ಟನ್ನು ನಮಗೆ ಕೊಟ್ಟಿರುವಿರಿ ಏಕೆ? ಸುಖವನ್ನು ನಿರೀಕ್ಷಿಸಿದೆವು, ಸಿಗಲಿಲ್ಲ ನಮಗೆ ಯಾವ ಫಲ. ಸುಕ್ಷೇಮವನ್ನು ಎದುರು ನೋಡಿದೆವು, ಇಗೋ ಬಂದೊದಗಿದೆ ಸಂಕಟ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿ ಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟು ಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ. ಕ್ಷೇಮ ಕಾಲವನ್ನು ಎದುರು ನೋಡಿದೆವು, ಹಾ, ಅಂಜಿಕೆಯೇ.