Jeremiah 14:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೂದ ಜನಾಂಗವು ಸತ್ತುಹೋದವರಿಗಾಗಿ ಗೋಳಾಡುವುದು. ಯೆಹೂದದ ನಗರಗಳಲ್ಲಿದ್ದ ಜನರು ದಿನೇದಿನೇ ನಿಬರ್ಲರಾಗುತ್ತಾರೆ. ಆ ಜನರು ನೆಲದ ಮೇಲೆ ಬಿದ್ದು ಬಿಡುತ್ತಾರೆ. ಜೆರುಸಲೇಮ್ ನಗರದಿಂದ ಜನರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇಮಿನವರ ಗೋಳಾಟವು ಕೇಳಿಸುತ್ತದೆ.
Kannada BSI Bible 2016
ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದವು ದುಃಖಿಸುತ್ತದೆ, ಅದರ ಊರುಗಳವರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇವಿುನವರ ಗೋಳಾಟವು ಕೇಳಿಸುತ್ತದೆ.
Kannada Bible (KNCL) BSI 2016
“ಜುದೇಯ ನಾಡು ದುಃಖಿಸುತ್ತಿದೆ ಅದರ ಪುರದ್ವಾರಗಳು ಬಹಳ ಕಪ್ಪಾಗಿವೆ. ಜೆರುಸಲೇಮಿನವರ ಗೋಳಾಟ ಕೇಳಿಸುತ್ತಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೂದವು ದುಃಖಪಡುತ್ತದೆ. ಅವಳ ನಗರಗಳು ಸೊರಗುತ್ತವೆ; ಅವರು ಭೂಮಿಗಾಗಿ ಗೋಳಾಡುತ್ತಾರೆ, ಯೆರೂಸಲೇಮಿನ ಕೂಗು ಏರಿ ಬಂತು.