Jeremiah 14:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನಾವು ಘಹಳ ಕೆಟ್ಟ ಜನರೆಂಬುದು ನಮಗೆ ಗೊತ್ತು. ನಮ್ಮ ಪೂರ್ವಿಕರು ದುಷ್ಕೃತ್ಯಗಳನ್ನು ಮಾಡಿದರೆಂಬುದನ್ನು ನಾವು ಘಲ್ಲೆವು. ಹೌದು, ನಾವು ನಿನ್ನ ವಿರುದ್ಧ ಪಾಪಮಾಡಿದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ, ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಾವು ನಿನಗೇ ಪಾಪಮಾಡಿದ್ದೇವೆ.
Kannada BSI Bible 2016
ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನಮ್ಮ ದುಷ್ಟತನವನ್ನೂ ನಮ್ಮ ಪಿತೃಗಳ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಿನಗೇ ಪಾಪಮಾಡಿದ್ದೇವಲ್ಲ.
Kannada Bible (KNCL) BSI 2016
ಹೇ ಸರ್ವೇಶ್ವರಾ, ಒಪ್ಪಿಕೊಂಡಿದ್ದೇವೆ ನಮ್ಮ ದುಷ್ಟತನವನ್ನು ನಮ್ಮ ಪೂರ್ವಜರು ಎಸಗಿದ ದುರಾಚಾರವನ್ನು ನಾವು ಮಾಡಿದ ಪಾಪ ನಿಮಗೆ ವಿರುದ್ಧವೆಂಬುದನ್ನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ನಮ್ಮ ದುಷ್ಟತನವನ್ನೂ, ನಮ್ಮ ಪಿತೃಗಳ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ, ನಿಮಗೆ ವಿರುದ್ಧವಾಗಿ ಪಾಪಮಾಡಿದ್ದೇವಲ್ಲಾ.