Jeremiah 14:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನಿನ್ನ ಹೆಸರಿನ ಒಳ್ಳೆಯತನ ಉಳಿಸಿಕೊಳ್ಳುವದಕ್ಕಾದರೂ ನಮ್ಮನ್ನು ದೂರ ತಳ್ಳಬೇಡ. ನಿನ್ನ ಮಹಿಮೆಯ ಸಿಂಹಾಸನದ ಗೌರವವನ್ನು ಕುಂದಿಸಬೇಡ. ನೀನು ನಮ್ಮೊಡನೆ ಮಾಡಿಕೊಂಡ ಒಡಂಘಡಿಕೆಯನ್ನು ಸ್ಮರಿಸಿಕೊ. ಆ ಒಡಂಘಡಿಕೆಯನ್ನು ಮುರಿಯಬೇಡ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.
Kannada BSI Bible 2016
ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ, ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.
Kannada Bible (KNCL) BSI 2016
ನಿಮ್ಮ ನಾಮವನ್ನು ಮುಂದಿಟ್ಟು, ನಮಗೆ ಅವಮಾನ ಮಾಡಬೇಡಿ ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ ನಮ್ಮೊಡನೆ ಮಾಡಿದ ಒಡಂಬಡಿಕೆಯನ್ನು ನೆನೆಯಿರಿ. ಅದನ್ನು ಭಂಗಪಡಿಸಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ನಾಮದ ಮೇಲೆ ದೃಷ್ಟಿಯಿಡಿ, ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ, ಅವಮಾನಪಡಿಸಬೇಡಿ. ನೀವು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರಿ.