Jeremiah 14:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನೀನು ಇಸ್ರೇಲರ ಆಶಾಕಿರಣ, ಕಷ್ಟ ಕಾಲದಲ್ಲಿ ಇಸ್ರೇಲನ್ನು ನೀನು ಕಾಪಾಡುವೆ. ಆದರೆ ಈಗ ನೀನು ಈ ದೇಶದಲ್ಲಿ ಪರದೇಶಿಯಂತೆ ಕಾಣುವೆ. ಕೇವಲ ಒಂದು ರಾತ್ರಿ ಮಾತ್ರ ಉಳಿಯುವ ಪ್ರಯಾಣಿಕನಂತೆ ಕಾಣುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ಸ್ವದೇಶದಲ್ಲಿ ಪರದೇಶಿಯಂತೆಯೂ, ಇಳಿದುಕೊಳ್ಳುವುದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೂ ಇದ್ದೀ?
Kannada BSI Bible 2016
ಅವರ ವಿಧವೆಗಳು ಸಮುದ್ರದ ಮರಳಿಗಿಂತ ನನಗೆ ಹೆಚ್ಚಾದರು. ನಾನು ಅವರ ಬಳಿಗೆ ಪ್ರಾಯದವರ ತಾಯಿಯ ಮೇಲೆ ಮಧ್ಯಾಹ್ನದಲ್ಲಿ ನಾಶನ ಮಾಡು ವವನನ್ನು ತರಿಸಿದ್ದೇನೆ; ಪಕ್ಕನೆ ಅವನು ಅವಳ ಮೇಲೆ ಬೀಳುವಂತೆ ಮಾಡುವೆನು, ಹೆದರಿಕೆಯನ್ನು ಪಟ್ಟಣದ ಮೇಲೆ ಬೀಳಮಾಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ದೇಶದಲ್ಲಿ ಪರದೇಶಿಯಂತೆಯೂ ಇಳಿದುಕೊಳ್ಳುವದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೆಯೂ ಇದ್ದೀ?
Kannada Bible (KNCL) BSI 2016
ಸರ್ವೇಶ್ವರಾ, ಇಸ್ರಯೇಲರಿಗೆ ನೀವೇ ನಿರೀಕ್ಷೆ ಇಕ್ಕಟ್ಟಿನಲ್ಲಿ ಅವರಿಗೆ ನೀವೇ ರಕ್ಷೆ. ನಾಡಿನಲ್ಲಿ ಅನ್ಯದೇಶೀಯನಂತಿರುವಿರಿ, ಏಕೆ? ರಾತ್ರಿ ಕಳೆಯಲು ಗುಡಾರಹಾಕಿದ ಪ್ರಯಾಣಿಕನಂತಿರುವಿರಿ, ಏಕೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓ ಇಸ್ರಾಯೇಲಿನ ನಿರೀಕ್ಷೆಯೇ, ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವವರೇ, ನೀನು ಏಕೆ ದೇಶದಲ್ಲಿ ಅನ್ಯನ ಹಾಗೆಯೂ, ರಾತ್ರಿ ಕಳೆಯುವುದಕ್ಕೆ ಇಳಿದುಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು?