Jeremiah 15:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!
Kannada BSI Bible 2016
ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು: “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ.