Jeremiah 15:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರೇ, ನಿಜವಾಗಿಯೂ ನಾನು ನಿನ್ನ ಸೇವೆಯನ್ನು ಚೆನ್ನಾಗಿ ಮಾಡಿದ್ದೇನೆ. ಕಷ್ಟದ ಕಾಲದಲ್ಲಿ ನನ್ನ ವೈರಿಗಳ ಬಗ್ಗೆ ನಾನು ನಿನ್ನಲ್ಲಿ ಪ್ರಾರ್ಥಿಸಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಕ್ಕೆ ಯೆಹೋವನು, “ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ಶತ್ರುವನ್ನು ನಿನಗೆ ಶರಣಾಗತನನ್ನಾಗಿ ಮಾಡುವೆನು.
Kannada BSI Bible 2016
ನಿಮ್ಮ ತಂದೆಗಳು ನನ್ನನ್ನು ಬಿಟ್ಟು ಬೇರೆ ದೇವರುಗಳನ್ನು ಹಿಂಬಾಲಿಸಿ ಸೇವಿಸಿ ಆರಾಧಿಸಿ ನನ್ನನ್ನು ತೊರೆದುಬಿಟ್ಟು, ನನ್ನ ನ್ಯಾಯ ಪ್ರಮಾಣವನ್ನು ಕೈಕೊಳ್ಳಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಕ್ಕೆ ಯೆಹೋವನು - ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು, ನಿಜನಿಜವಾಗಿ ನಿನ್ನ ಶತ್ರುವನ್ನು ಕೇಡಿನಲ್ಲಿಯೂ ಇಕ್ಕಟ್ಟಿನಲ್ಲಿಯೂ ನಿನಗೆ ಶರಣಾಗತನನ್ನಾಗಿ ಮಾಡುವೆನು.
Kannada Bible (KNCL) BSI 2016
ಸರ್ವೇಶ್ವರಾ, ನಾನು ನಿಮಗೆ ಶ್ರೇಷ್ಠವಾದ ಸೇವೆಸಲ್ಲಿಸದೆ ಹೋಗಿದ್ದರೆ, ನನ್ನ ಶತ್ರುಗಳು ಕಷ್ಟಸಂಕಟಗಳಲ್ಲಿ ಸಿಕ್ಕಿಬಿದ್ದ ಕಾಲದಲ್ಲಿ ಅವರ ಪರವಾಗಿ ನಿನಗೆ ಮೊರೆಯಿಡದೆ ಇದ್ದಿದ್ದರೆ ನನಗೆ ಶಾಪ ತಗುಲಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಕ್ಕೆ ಯೆಹೋವ ದೇವರು, ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಶತ್ರುವನ್ನು ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ನಿನಗೆ ಶರಣಾಗತನನ್ನಾಗಿ ಮಾಡುವೆನು.