Jeremiah 15:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ಜನರೇ, ನಾನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವೆನು. ಅವರು ನೀವೆಂದೂ ತಿಳಿಯದ ಪ್ರದೇಶದಿಂದ ಬಂದು ನಿಮ್ಮನ್ನು ಅಲ್ಲಿಗೆ ಸಾಗಿಸುವರು. ನನಗೆ ಅತಿಕೋಪ ಘಂದಿದೆ. ನನ್ನ ಕೋಪವು ಜಾಬಲೆಯಂತಿದೆ. ಆ ಜಾಬಲೆಯಿಂದ ನೀವು ಸುಟ್ಟುಹೋಗುವಿರಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳನ್ನು ನಿನ್ನ ಶತ್ರುಗಳ ಕೈಗೆ ಕೊಟ್ಟು, ನೀನು ನೋಡದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವುದು.”
Kannada BSI Bible 2016
ಆದದರಿಂದ ಇಗೋ, ಕರ್ತನು ಹೇಳುವದೇ ನಂದರೆ--ಇಗೋ, ಇಸ್ರಾಯೇಲಿನ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಇನ್ನು ಹೇಳುವದಿಲ್ಲ;
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಶತ್ರುಗಳ ಕೈಗೆ ಕೊಟ್ಟು ನೀನು ನೋಡದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವದು.
Kannada Bible (KNCL) BSI 2016
ಅಪರಿಚಿತ ನಾಡಿಗೆ ಅವರನ್ನು ಸಾಗಿಸುವೆನು. ಅಲ್ಲಿ ಶತ್ರುಗಳಿಗೇ ಊಳಿಗದವರನ್ನಾಗಿಸುವೆನು. ಏಕೆಂದರೆ ನನ್ನ ಕೋಪಾಗ್ನಿ ಉರಿಯುತ್ತಿದೆ. ಅದು ನಿಮ್ಮನ್ನು ಸುಟ್ಟುಹಾಕುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಶತ್ರುಗಳ ಕೈಗೆ ಕೊಟ್ಟು, ನಿನ್ನನ್ನು ಗೊತ್ತಿಲ್ಲದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವುದು.