Jeremiah 15:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಸಂದೇಶ ನನಗೆ ಘಂದಿತು. ನಾನು ನಿನ್ನ ಮಾತುಗಳನ್ನು ಆಹಾರವನ್ನಾಗಿ ಮಾಡಿಕೊಂಡೆ. ನಿನ್ನ ಸಂದೇಶದಿಂದ ನನಗೆ ತುಂಬಾ ಸಂತೋಷವಾಯಿತು. ನಿನ್ನನ್ನು ಹೆಸರಿಡಿದು ಕರೆಯುವುದರಿಂದ ನನಗೆ ಹೆಚ್ಚಿನ ಸಂತೋಷವಾಗಿತ್ತು. ನಿನ್ನ ಹೆಸರು ಸರ್ವಶಕ್ತನಾದ ಯೆಹೋವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!
Kannada BSI Bible 2016
ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ ಹೃದಯಾನಂದವೂ ಆದವು; ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!
Kannada Bible (KNCL) BSI 2016
ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರ ಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವ ದೇವರೇ, ನಾನು ನಿನ್ನ ಹೆಸರಿನವನಲ್ಲವೇ!