Jeremiah 15:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗಿದ್ದರೂ ನನಗೇಕೆ ವ್ಯಥೆ ಉಂಟಾಗುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನನ್ನ ಗಾಯ ಏಕೆ ಗುಣವಾಗುತ್ತಿಲ್ಲ? ಏಕೆ ವಾಸಿಯಾಗುತ್ತಿಲ್ಲ ಎಂಬುದು ನನಗೆ ತಿಳಿಯದು. ಯೆಹೋವನೇ, ನಿನ್ನಲ್ಲಿ ಘದಲಾವಣೆಯಾಗಿದೆ ಎಂದು ನನಗೆ ಅನಿಸುತ್ತಿದೆ. ನೀನು ಪ್ರವಾಹ ನಿಂತುಹೋದ ನೀರಿನ ಬುಗ್ಗೆಯಂತಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದದೆ ಇರುವುದು ಏಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ?” ಎಂದು ಅರಿಕೆಮಾಡಿಕೊಂಡೆನು.
Kannada BSI Bible 2016
ಆದರೆ ನಾನು ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಎರಡರಷ್ಟು ಪ್ರತಿಫಲ ಕೊಡು ತ್ತೇನೆ. ಅವರು ನನ್ನ ದೇಶವನ್ನು ತಮ್ಮ ಹೇಸಿಗೆ ಹೆಣ ಗಳಿಂದ ಅಪವಿತ್ರ ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯಗಳಿಂದ ತುಂಬಿಸಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದಲೊಲ್ಲದೇಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ [ಎಂದು ಅರಿಕೆಮಾಡಿಕೊಂಡೆನು.]
Kannada Bible (KNCL) BSI 2016
ನನಗೇಕೆ ನಿರಂತರವಾದ ವೇದನೆ? ಗುಣವಾಗದ ಗಡಸು ಗಾಯ? ನೀರು ಇರುವುದಾಗಿ ತೋರಿಸಿಕೊಳ್ಳುವ ಕಳ್ಳ ತೊರೆಯಾಗಬೇಕೆ ನೀವು ನನಗೆ?”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣ ಹೋಗಲೊಲ್ಲದೇಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ? ಎಂದು ಅರಿಕೆಮಾಡಿಕೊಂಡೆನು.