Jeremiah 15:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಘದಲಾವಣೆ ಹೊಂದಿ ನನ್ನಲ್ಲಿಗೆ ಘಂದರೆ ನಾನು ನಿನ್ನನ್ನು ದಂಡಿಸುವುದಿಲ್ಲ. ನೀನು ಘದಲಾವಣೆ ಹೊಂದಿ ನನ್ನಲ್ಲಿಗೆ ಘಂದರೆ ನೀನು ನನ್ನ ಸೇವೆ ಮಾಡಘಹುದು. ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವದಾದರೆ ನೀನು ನನ್ನ ಪರವಾಗಿ ಮಾತನಾಡಘಹುದು. ಯೆರೆಮೀಯನೇ, ಯೆಹೂದದ ಜನರು ಘದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. ಆದರೆ ನೀನು ಘದಲಾವಣೆ ಹೊಂದಿ ಅವರಂತೆ ಆಗಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.
Kannada BSI Bible 2016
ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರಿಂದ ಯೆಹೋವನು ಹೀಗಂದಿದ್ದಾನೆ - ನೀನು [ನನ್ನ ಕಡೆಗೆ] ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು; ನೀನು ತುಚ್ಫವಾದದ್ದನ್ನು ನಿರಾಕರಿಸಿ ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.
Kannada Bible (KNCL) BSI 2016
ಅದಕ್ಕೆ ಸರ್ವೇಶ್ವರ: “ನೀನು ನನಗೆ ಅಭಿಮುಖನಾಗಿ ಹಿಂದಿರುಗಿ ಬಂದರೆ ಮರಳಿ ನಿನ್ನನ್ನು ನನ್ನ ಸೇವೆಗೆ ಸೇರಿಸಿಕೊಳ್ಳುವೆನು. ತುಚ್ಛವಾದುದನ್ನು ತೊರೆದು ಅಮೂಲ್ಯವಾದುದನ್ನು ಉಚ್ಚರಿಸುವೆಯಾದರೆ ನೀನು ನನ್ನ ಬಾಯಂತಿರುವೆ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು. ನೀನು ಅವರ ಕಡೆಗೆ ತಿರುಗದಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಯೆಹೋವ ದೇವರು ಹೀಗೆನ್ನುತ್ತಾರೆ: ನೀನು ಮಾನಸಾಂತರಪಟ್ಟರೆ, ನೀನು ನನಗೆ ಸೇವೆಮಾಡುವಂತೆ ನಾನು ನಿನ್ನನ್ನು ಪುನಃಸ್ಥಾಪಿಸುವೆನು. ನೀನು ತುಚ್ಛವಾದವುಗಳಿಗೆ ಬದಲಾಗಿ ಅಮೂಲ್ಯವಾದವುಗಳನ್ನೇ ಮಾತನಾಡುತ್ತಿದ್ದರೆ, ನೀನು ನನ್ನ ಬಾಯಿಯ ಹಾಗಿರುವೆ. ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂದಿರುಗಬೇಡ.