Jeremiah 15:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ‘ಯೆಹೋವನು ಹೀಗೆ ಹೇಳಿದ್ದಾನೆ’ ಎಂದು ನೀನು ಅವರಿಗೆ ಹೇಳು. ‘ಕೆಲವು ಜನರು ಮರಣಹೊಂದಙೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಙೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಘಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’” ಎಂದು ಹೇಳು.
Kannada BSI Bible 2016
ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು;
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಅವರಿಗೆ - ಮರಣವ್ಯಾಧಿಗೆ ಗೊತ್ತಾದವರು ಮರಣವ್ಯಾಧಿಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ, ಕ್ಷಾಮಕ್ಕೆ ಗೊತ್ತಾದವರು ಕ್ಷಾಮಕ್ಕೆ, ಸೆರೆಗೆ ಗೊತ್ತಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ ಎಂದು ಹೇಳು.
Kannada Bible (KNCL) BSI 2016
‘ನಾವೆಲ್ಲಿಗೆ ಹೋಗಬೇಕು?’ ಎಂದು ಕೇಳಿಯಾರು. ಆಗ ನೀನು ಅವರಿಗೆ: ‘ಇದು ಸರ್ವೇಶ್ವರನ ಸಂದೇಶ: ಮರಣವ್ಯಾಧಿಗೆ ಗೊತ್ತಾದವರು ಮರಣವ್ಯಾಧಿಗೆ ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಕ್ಷಾಮಕ್ಕೆ ಗೊತ್ತಾದವರು ಕ್ಷಾಮಕ್ಕೆ ಸೆರೆಗೆ ಗೊತ್ತಾದವರು ಸೆರೆಗೆ ಗುರಿಯಾಗಿ ಸಾಯುವರು’ ಎಂದು ಹೇಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಿನಗೆ, ‘ನಾವು ಎಲ್ಲಿ ಹೋಗಬೇಕು?’ ಎಂದು ಹೇಳಿದರೆ, ನೀನು ಅವರಿಗೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಮರಣಕ್ಕೆ ಇರುವವರು ಮರಣಕ್ಕೆ; ಖಡ್ಗಕ್ಕೆ ಇರುವವರು ಖಡ್ಗಕ್ಕೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ; ಸೆರೆಗೆ ಇರುವವರು ಸೆರೆಗೆ,’ ಎಂದು ಹೇಳಬೇಕು.