Jeremiah 15:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದದ ಜನರನ್ನು ಭೂಲೋಕದ ಎಲ್ಲಾ ಜನರಿಗೆ ಒಂದು ಭಯಾನಕವಾದ ಉದಾಹರಣೆಯಾಗುವಂತೆ ಮಾಡುತ್ತೇನೆ. ಮನಸ್ಸೆಯು ಜೆರುಸಲೇಮಿನಲ್ಲಿ ಮಾಡಿದ ಪಾಪಕೃತ್ಯಗಳ ಫಲವಾಗಿ ನಾನು ಯೆಹೂದದಲ್ಲಿ ಹೀಗೆ ಮಾಡುತ್ತೇನೆ. ಮನಸ್ಸೆಯು ರಾಜನಾದ ಹಿಜ್ಕೀಯನ ಮಗನಾಗಿದ್ದನು. ಮನಸ್ಸೆಯು ಯೆಹೂದದ ರಾಜನಾಗಿದ್ದನು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇಮಿನಲ್ಲಿ ನಡೆಸಿದ್ದಕ್ಕೆ ಪ್ರತಿಯಾಗಿ, ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.
Kannada BSI Bible 2016
ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇವಿುನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಅವರನ್ನು ಲೋಕದ ಸಮಸ್ತರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.
Kannada Bible (KNCL) BSI 2016
ಈ ಜನರನ್ನು ಜಗದ ರಾಜ್ಯಗಳೆಲ್ಲವು ಭಯೋತ್ಪಾದಕರೆಂದು ಭಾವಿಸುವಂತೆ ಮಾಡುವೆನು. ಹಿಜ್ಕೀಯನ ಮಗನು ಹಾಗು ಜುದೇಯದ ಅರಸನು ಆದ ಮನಸ್ಸೆಯು ಜೆರುಸಲೇಮಿನಲ್ಲಿ ನಡೆಸಿದ ದುಷ್ಕೃತ್ಯಕ್ಕೆ ಇದು ಪ್ರತೀಕಾರವಾಗಿರುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯು ಯೆರೂಸಲೇಮಿನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಂತೆ ಮಾಡುವೆನು.