Jeremiah 15:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಜೆರುಸಲೇಮ್ ನಗರವೇ, ನಿನಗಾಗಿ ಯಾರೂ ವ್ಯಥೆಪಡುವದಿಲ್ಲ. ನಿನಗಾಗಿ ದುಃಖಪಡುವುದಿಲ್ಲ ಮತ್ತು ಆಳುವುದಿಲ್ಲ. ಯಾರೂ ತಮ್ಮ ದಿನನಿತ್ಯದ ಕೆಲಸಕಾರ್ಯಗಳನ್ನು ಬಿಟ್ಟು ನಿನ್ನ ಯೋಗಕ್ಷೇಮವನ್ನು ವಿಚಾರಿಸಲು ಬರುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೂಸಲೇಮೇ, ಯಾರು ನಿನ್ನನ್ನು ಕರುಣಿಸುವರು? ನಿನಗಾಗಿ ಯಾರು ಪ್ರಲಾಪಿಸುವರು? ನಿನ್ನ ಕ್ಷೇಮವನ್ನು ವಿಚಾರಿಸಲು ಯಾರು ನಿನ್ನ ಕಡೆಗೆ ತಿರುಗುವರು?
Kannada BSI Bible 2016
ಕರ್ತನು ಹೀಗೆ ಹೇಳುತ್ತಾನೆ--ದುಃಖದ ಮನೆ ಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡು ವದಕ್ಕೂ ದುಃಖಪಡುವದಕ್ಕೂ ಹೋಗಬೇಡ; ನಾನು ನನ್ನ ಸಮಾಧಾನವನ್ನೂ ಕೃಪೆಯನ್ನೂ ಕರುಣೆಯನ್ನೂ ಈ ಜನರಿಂದ ತೆಗೆದುಹಾಕಿದ್ದೇನೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇಮೇ, ಯಾರು ನಿನ್ನನ್ನು ಕರುಣಿಸುವರು? ನಿನಗಾಗಿ ಯಾರು ಬಡುಕೊಳ್ಳುವರು? ನಿನ್ನ ಕ್ಷೇಮವನ್ನು ವಿಚಾರಿಸಲು ಯಾರು ನಿನ್ನ ಕಡೆಗೆ ತಿರುಗುವರು?
Kannada Bible (KNCL) BSI 2016
“ಜೆರುಸಲೇಮೆ, ನಿನಗೆ ಕರುಣೆ ತೋರುವವರಾರು? ನಿನ್ನ ಪರಿಸ್ಥಿತಿಯನ್ನು ಕಂಡು ಪ್ರಲಾಪಿಸುವವರಾರು? ತಿರುಗಿ ನೋಡಿ ನಿನ್ನ ಕ್ಷೇಮವನ್ನು ವಿಚಾರಿಸುವವರಾರು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆರೂಸಲೇಮೇ, ನಿನ್ನ ಮೇಲೆ ಯಾರು ಕನಿಕರಪಡುವರು, ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವುದಕ್ಕೆ ಯಾರು ಹೋಗುವರು?