Jeremiah 15:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಸಲೇಮೇ, ನೀನು ನನ್ನನ್ನು ತ್ಯಜಿಸಿದೆ” ಇದು ಯೆಹೋವನ ನುಡಿ. “ಮತ್ತೆಮತ್ತೆ ನೀನು ನನ್ನನ್ನು ತ್ಯಜಿಸಿದೆ. ಆದ್ದರಿಂದ ನಾನು ನಿನ್ನನ್ನು ದಂಡಿಸುತ್ತೇನೆ ಮತ್ತು ನಾಶಮಾಡುತ್ತೇನೆ. ನಿನಗೆ ಸಲ್ಲಙೇಕಾದ ಶಿಕ್ಷೆಯನ್ನು ಪುನಃ ತಡೆಹಿಡಿದು ನಾನು ದಣಿದಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಈ ಮಾತನ್ನು ಕೇಳು, ‘ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ. ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು.
Kannada BSI Bible 2016
ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಈ ಮಾತನ್ನು ಕೇಳು - ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದೀ; ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ಕ್ಷವಿುಸಿ ಕ್ಷವಿುಸಿ ಸಾಕಾಯಿತು.
Kannada Bible (KNCL) BSI 2016
ಸರ್ವೇಶ್ವರನಾದ ನನ್ನ ಈ ಮಾತುಗಳನ್ನು ಕೇಳು: ನೀನು ನನ್ನನ್ನು ಅಲ್ಲಗಳೆದು ನನಗೆ ವಿಮುಖಳಾಗಿರುವೆ. ಆದಕಾರಣ ನಿನ್ನನ್ನು ನಾಶಮಾಡಲು ಕೈಯೆತ್ತಿರುವೆ ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಗಿದೆ ನನಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನನ್ನನ್ನು ಬಿಟ್ಟುಬಿಟ್ಟಿದ್ದೀ,” ಎಂದು ಯೆಹೋವ ದೇವರು ಹೇಳುತ್ತಾರೆ. “ನೀನು ಹಿಂಜಾರಿದೆ. ಆದ್ದರಿಂದ ನನ್ನ ಕೈಯನ್ನು ನಿನಗೆ ವಿರೋಧವಾಗಿ ಚಾಚಿ, ನಿನ್ನನ್ನು ನಾಶಮಾಡುವೆನು. ನಿನಗೆ ಅನುಕಂಪ ತೋರಿಸುವುದರಲ್ಲಿ ದಣಿದಿದ್ದೇನೆ.