Jeremiah 15:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದದ ಜನರನ್ನು ನಾನು ಕವೆಗೋಲಿನಿಂದ ವಿಂಗಡಿಸಿದ ದೇಶದ ಎಲ್ಲಾ ನಗರಗಳ ದ್ವಾರದಲ್ಲಿ ಚದರಿಸುತ್ತೇನೆ. ನನ್ನ ಜನರು ಘದಲಾಗಲಿಲ್ಲ. ನಾನು ಅವರನ್ನು ನಾಶಮಾಡುತ್ತೇನೆ. ನಾನು ಅವರ ಮಕ್ಕಳನ್ನು ಕಸಿದುಕೊಳ್ಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಜನರನ್ನು ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು. ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.
Kannada BSI Bible 2016
ಸತ್ತವರ ವಿಷಯದಲ್ಲಿ ಅವರನ್ನು ಆದರಿಸುವ ಹಾಗೆ ಜನರು ಹರಿದುಕೊಳ್ಳುವದಿಲ್ಲ; ಅವರ ತಂದೆ ತಾಯಿಗಳ ವಿಷಯವಾದರೋ ಅವರಿಗೆ ಆದರಣೆಯ ಪಾತ್ರೆಯನ್ನು ಕುಡಿಯಲು ಕೊಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಜನರನ್ನು ದೇಶದ ಉಕ್ಕಡಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು; ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.
Kannada Bible (KNCL) BSI 2016
ನನ್ನ ಜನರನ್ನು ನಾಡಿನ ಉಕ್ಕಡಗಳಲ್ಲಿ ಮೊರದಿಂದ ಗಾಳಿಗೆ ತೂರಿಬಿಟ್ಟೆನು. ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸಿದೆನು. ಏಕೆಂದರೆ, ಅವರು ತಮ್ಮ ದುರ್ಮಾರ್ಗದಿಂದ ಹಿಂದಿರುಗದೆ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು. ನನ್ನ ಜನರನ್ನು ನಾಶಮಾಡಿ ಅವರಿಗೆ ಶೋಕವನ್ನು ನೀಡುವೆನು. ಅವರು ತಮ್ಮ ಮಾರ್ಗಗಳನ್ನು ಬಿಟ್ಟು, ಹಿಂದಿರುಗದೆ ಇದ್ದುದರಿಂದ