Jeremiah 16:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆರೆಮೀಯನೇ, ನೀನು ಈ ವಿಷಯವನ್ನು ಯೆಹೂದದ ಜನರಿಗೆ ಹೇಳಿದಾಗ ‘ಈ ಮಹಾವಿಪತ್ತು ನಮಗೆ ಸಂಭವಿಸಙೇಕೆಂದು ಯೆಹೋವನು ಏಕೆ ನಿರ್ಣಯಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಅವರು ಕೇಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಕೇಳುವಾಗ,
Kannada BSI Bible 2016
ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು - ಈ ಮಹಾ ವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪವೇನು ಎಂದು ಕೇಳುವಾಗ
Kannada Bible (KNCL) BSI 2016
“ಇದನ್ನೆಲ್ಲ ನೀನು ಆ ಜನರಿಗೆ ತಿಳಿಸುವಾಗ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಸರ್ವೇಶ್ವರ ವಿಧಿಸಿದ್ದೇಕೆ? ನಾವು ಮಾಡಿದ ಅಪರಾಧವಾದರೂ ಏನು? ನಮ್ಮ ದೇವರಾದ ಸರ್ವೇಶ್ವರನಿಗೆ ವಿರುದ್ಧ ನಾವು ಕಟ್ಟಿಕೊಂಡ ಪಾಪವೇನು?’ ಎಂದು ಕೇಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ, ‘ಏಕೆ ಯೆಹೋವ ದೇವರು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಮಾತಾಡಿದ್ದಾರೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಮಾಡಿರುವ ಪಾಪವೇನು?’ ಎಂದು ಹೇಳಿದರೆ, ನೀನು ಅವರಿಗೆ ಹೀಗೆ ಹೇಳಬೇಕು: