Jeremiah 16:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಅವರಿಗೆ ಹೀಗೆ ಹೇಳಬೇಕು: ‘ನಿಮ್ಮ ಪೂರ್ವಿಕರು ನನ್ನ ಉಪದೇಶದಂತೆ ನಡೆಯುವದನ್ನು ಬಿಟ್ಟುಬಿಟ್ಟರು’ ಎಂದು ದೇವರು ಹೇಳುತ್ತಾನೆ. ‘ಅವರು ನನ್ನ ಅನುಸರಣೆಯನ್ನು ಬಿಟ್ಟು ಬೇರೆ ದೇವರುಗಳನ್ನು ಅನುಸರಿಸಲು ಮತ್ತು ಸೇವಿಸಲು ಪ್ರಾರಂಭಿಸಿದರು. ಅವರು ಅನ್ಯದೇವರುಗಳನ್ನು ಪೂಜಿಸಿದರು. ನಿಮ್ಮ ಪೂರ್ವಿಕರು ನನ್ನನ್ನು ತ್ಯಜಿಸಿ ನನ್ನ ಧರ್ಮವಿಊಗಳನ್ನು ಮೀರಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪೂರ್ವಿಕರು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ, ಪೂಜಿಸಿ ನನ್ನನ್ನು ಬಿಟ್ಟು, ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ,
Kannada BSI Bible 2016
ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಅವರಿಗೆ ಹೀಗೆ ಹೇಳಬೇಕು - ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪಿತೃಗಳು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸಿ ನನ್ನನ್ನು ಬಿಟ್ಟು ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ
Kannada Bible (KNCL) BSI 2016
ಆಗ ನೀನು ಅವರಿಗೆ ಹೀಗೆಂದು ಹೇಳಬೇಕು: ಸರ್ವೇಶ್ವರನ ಈ ಮಾತಿಗೆ ಕಿವಿಗೊಡಿ: ‘ನಿಮ್ಮ ಪೂರ್ವಜರು ನನ್ನನ್ನು ತೊರೆದುಬಿಟ್ಟರು. ಅನ್ಯದೇವತೆಗಳನ್ನು ಹಿಂಬಾಲಿಸಿದರು. ಅವುಗಳಿಗೆ ಸೇವೆಸಲ್ಲಿಸಿ ಪೂಜಿಸಿದರು. ನನ್ನನ್ನು ಬಿಟ್ಟುದಲ್ಲದೆ ನನ್ನ ಧರ್ಮವಿಧಿಗಳನ್ನು ಮೀರಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನಿಮ್ಮ ಪಿತೃಗಳು ನನ್ನನ್ನು ಬಿಟ್ಟುಬಿಟ್ಟದ್ದರಿಂದಲೇ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಅವರು ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳನ್ನು ಆರಾಧಿಸಿ, ನನ್ನನ್ನು ತೊರೆದುಬಿಟ್ಟು, ನನ್ನ ನಿಯಮವನ್ನು ಕೈಗೊಳ್ಳಲಿಲ್ಲ.