Jeremiah 16:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನಾನು ನಿಮ್ಮನ್ನು ಈ ದೇಶದ ಹೊರಗೆ ಎಸೆಯುತ್ತೇನೆ. ನೀವು ಪರದೇಶಕ್ಕೆ ಸೆರೆಹೋಗುವಂತೆ ಮಾಡುತ್ತೇನೆ. ನೀವು ಮತ್ತು ನಿಮ್ಮ ಪೂರ್ವಿಕರು ಎಂದೂ ನೋಡದ ಪ್ರದೇಶಕ್ಕೆ ನೀವು ಹೋಗುವಿರಿ. ಆ ಪ್ರದೇಶದಲ್ಲಿ ನೀವು ನಿಮ್ಮ ಮನಸ್ಸಿಗೆ ಘಂದಷ್ಟು ಸುಳ್ಳುದೇವತೆಗಳ ಸೇವೆಮಾಡಘಹುದು. ನಾನು ನಿಮಗೆ ಸಹಾಯವನ್ನೂ ಮಾಡುವದಿಲ್ಲ, ಯಾವ ರೀತಿಯ ಒಲವನ್ನೂ ತೋರುವದಿಲ್ಲ.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವಾಗಲಿ ಅಥವಾ ನಿಮ್ಮ ಪೂರ್ವಿಕರಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸುವುದಿಲ್ಲ’” ಎಂದು ಹೇಳಿದನು.
Kannada BSI Bible 2016
ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವಾಗಲಿ ನಿಮ್ಮ ಪಿತೃಗಳಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸೆನು.
Kannada Bible (KNCL) BSI 2016
ಈ ಕಾರಣಗಳ ನಿಮಿತ್ತ ನೀವಾಗಲಿ ನಿಮ್ಮ ಪೂರ್ವಜರಾಗಲಿ ನೋಡದ ನಾಡಿಗೆ ನಿಮ್ಮನ್ನು ಇಲ್ಲಿಂದ ಎಸೆದುಬಿಡುವೆನು. ಅಲ್ಲಿ ಹಗಲಿರುಳೂ ಅನ್ಯದೇವತೆಗಳಿಗೆ ಸೇವೆಮಾಡುವಿರಿ, ನನ್ನ ದಯೆ ದಾಕ್ಷಿಣ್ಯ ಮಾತ್ರ ನಿಮಗೆ ದೊರಕದು\.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ, ನಿಮಗೂ, ನಿಮ್ಮ ಪಿತೃಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು. ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆ ಮಾಡುವಿರಿ ಮತ್ತು ನಾನು ನಿಮಗೆ ಕನಿಕರ ತೋರಿಸುವುದಿಲ್ಲ.’