Jeremiah 16:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದೆಬಷೀಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.”
Kannada BSI Bible 2016
ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಅಧರ್ಮಕ್ಕೂ ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ದೇಶವನ್ನು ಹೊಲಸು ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.
Kannada Bible (KNCL) BSI 2016
ಮೊತ್ತ ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಇಮ್ಮಡಿ ಶಿಕ್ಷೆಯನ್ನು ಕೊಡುವೆನು. ಏಕೆಂದರೆ ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ನಾಡನ್ನು ಹೊಲಸುಮಾಡಿದ್ದಾರೆ. ಅಸಹ್ಯವಾದ ವಸ್ತುಗಳಿಂದ ಆ ನನ್ನ ಸ್ವಂತ ನಾಡನ್ನು ತುಂಬಿಸಿಬಿಟ್ಟಿದ್ದಾರೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮೊದಲು ನಾನು ಅವರ ಅಕ್ರಮಕ್ಕೂ, ಅವರ ಪಾಪಕ್ಕೂ ಎರಡಷ್ಟು ಪ್ರತಿಫಲ ಕೊಡುತ್ತೇನೆ. ಅವರು ನನ್ನ ದೇಶವನ್ನು ತಮ್ಮ ದುಷ್ಕೃತ್ಯಗಳಿಂದ ಅಪವಿತ್ರ ಮಾಡಿ, ನನ್ನ ಸೊತ್ತನ್ನು ತಮ್ಮ ಅಸಹ್ಯ ವಿಗ್ರಹಗಳಿಂದ ತುಂಬಿಸಿದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.