Jeremiah 16:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ವಿಗ್ರಹಗಳನ್ನು ಮಾಡುವ ಜನರಿಗೆ ನಾನು ಪಾಠ ಕಲಿಸುತ್ತೇನೆ. ಈಗಲೇ ನಾನು ಅವರಿಗೆ ನನ್ನ ಶಕ್ತಿಯ ಬಗ್ಗೆ ಮತ್ತು ನನ್ನ ಘಲದ ಬಗ್ಗೆ ಕಲಿಸುವೆನು. ಆಗ ನಾನು ದೇವರೆಂಬುದು ಅವರಿಗೆ ತಿಳಿಯುವುದು. ನಾನೇ ಯೆಹೋವನು ಎಂಬುದು ಅವರಿಗೆ ಗೊತ್ತಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ನಿಮಿತ್ತವಾಗಿ, ಇಗೋ, ಇದೊಂದೇ ಸಲ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು, ಹೌದು, ಗ್ರಹಿಸಮಾಡುವೆನು; ನನ್ನ ನಾಮಧೇಯವು “ಯೆಹೋವ” ಎಂದು ಅವರಿಗೆ ಗೊತ್ತಾಗುವುದು.
Kannada BSI Bible 2016
ಕರ್ತನು ಹೀಗೆ ಹೇಳುತ್ತಾನೆ--ನಿಮಗೆ ನೀವೇ ಎಚ್ಚರಿಕೆಯಾಗಿರ್ರಿ; ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತಕ್ಕೊಂಡು ಬರಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ನಿವಿುತ್ತವಾಗಿ, ಇಗೋ, ಇದೊಂದೇ ಸಲ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು, ಹೌದು, ಗ್ರಹಿಸಮಾಡುವೆನು; ನನ್ನ ನಾಮಧೇಯವು ಯೆಹೋವನೆಂದೇ ಅವರಿಗೆ ಗೊತ್ತಾಗುವದು.
Kannada Bible (KNCL) BSI 2016
ಸರ್ವೇಶ್ವರ: “ಆದುದರಿಂದ ಇಗೋ, ಇಂದೊಮ್ಮೆ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು. ಚೆನ್ನಾಗಿ ಗ್ರಹಿಸುವಂತೆ ಮಾಡುವೆನು. ನನ್ನ ನಾಮಧೇಯ ಸರ್ವೇಶ್ವರ ಎಂದೇ ಅವರು ಗುರುತು ಹಚ್ಚುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಇಗೋ, ನಾನು ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ, ನನ್ನ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಯೆಹೋವ ದೇವರೇ, ಎಂದು ಅವರು ತಿಳಿದುಕೊಳ್ಳುವರು.