Jeremiah 16:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೂದದ ಪ್ರಮುಖರು ಮತ್ತು ಜನಸಾಮಾನ್ಯರು ಸತ್ತುಹೋಗುವರು. ಯಾರೂ ಅವರನ್ನು ಹೂಳುವದಿಲ್ಲ. ಅವರಿಗೋಸ್ಕರ ಗೋಳಾಡುವದಿಲ್ಲ. ಅವರ ಬಗ್ಗೆ ದುಃಖ ಸೂಚಿಸಲು ಯಾರೂ ತಮಗೆ ಗಾಯಗಳನ್ನು ಮಾಡಿಕೊಳ್ಳುವದಿಲ್ಲ; ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ದೇಶದಲ್ಲಿನ ದೊಡ್ಡವರೂ. ಅಲ್ಪರೂ ಸಾಯುವರು. ಅವರನ್ನು ಯಾರೂ ಹೂಣಿಡುವುದಿಲ್ಲ, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಗಾಯಮಾಡಿಕೊಳ್ಳುವುದಿಲ್ಲ, ತಲೆಬೋಳಿಸಿಕೊಳ್ಳುವುದಿಲ್ಲ.
Kannada BSI Bible 2016
ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ದೇಶದಲ್ಲಿನ ದೊಡ್ಡವರೂ ಅಲ್ಪರೂ ಸಾಯುವರು; ಅವರನ್ನು ಯಾರೂ ಹೂಣಿಡರು, ಅವರಿಗಾಗಿ ಯಾರೂ ಗೋಳಾಡರು, ಗಾಯ ಮಾಡಿಕೊಳ್ಳರು, ತಲೆಬೋಳಿಸಿಕೊಳ್ಳರು;
Kannada Bible (KNCL) BSI 2016
ಈ ನಾಡಿನಲ್ಲಿ ದೊಡ್ಡವರು ಹಾಗುಚಿಕ್ಕವರು ಸಾಯುವರು. ಅವರನ್ನು ಯಾರು ಹೂಣಿಡುವುದಿಲ್ಲ. ಅವರಿಗಾಗಿ ಯಾರೂ ಗೋಳಾಡುವುದಿಲ್ಲ. ದೇಹವನ್ನು ಹುಣ್ಣಾಗಿಸಿಕೊಳ್ಳುವುದಿಲ್ಲ. ತಲೆ ಬೋಳಿಸಿಕೊಳ್ಳುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು. ಅವರಿಗೆ ಸಮಾಧಿಯಾಗುವುದಿಲ್ಲ, ಅವರಿಗೋಸ್ಕರ ಯಾರೂ ತಮ್ಮನ್ನು ಕೊಯ್ದುಕೊಳ್ಳುವುದಿಲ್ಲ, ತಮ್ಮ ತಲೆ ಬೋಳಿಸಿಕೊಳ್ಳುವುದೂ ಇಲ್ಲ.