Jeremiah 17:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೂದದ ಜನರ ಅಪರಾಧ ಅಳಿಸಲಾಗದ ಸ್ಥಳದಲ್ಲಿ ಬರೆಯಲಾಗಿದೆ. ಆ ಅಪರಾಧಗಳು ಕಬ್ಬಿಣದ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಪಾಪಗಳು ವಜ್ರದ ಮೊನೆಯುಳ್ಳ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಹೃದಯವೇ ಆ ಕಲ್ಲು, ಆ ಪಾಪಗಳು ಅವರ ಯಜ್ಞವೇದಿಕೆಗಳ ಕೊಂಬುಗಳಲ್ಲಿ ಕೆತ್ತಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ. ಅದು ಅವರ ಹೃದಯದ ಹಲಗೆಯಲ್ಲಿಯೂ, ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.
Kannada BSI Bible 2016
ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ; ಅವರ ಹೃದಯದ ಹಲಗೆಯಲ್ಲಿಯೂ ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಜುದೇಯದ ಜನರಿಗೆ ಹೀಗೆನ್ನುತ್ತಾರೆ: “ಜುದೇಯದ ಪಾಪವನ್ನು ಕಬ್ಬಿಣದ ಲೇಖನಿಯಿಂದ, ವಜ್ರದ ಮೊನೆಯಿಂದ ಬರೆಯಲಾಗಿದೆ. ಅದನ್ನು ನಿಮ್ಮ ಜನರ ಹೃದಯದ ಹಲಗೆಯ ಮೇಲೂ ಅವರ ಬಲಿಪೀಠಗಳ ಕೊಂಬುಗಳ ಮೇಲೂ ಕೆತ್ತಲಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ, ವಜ್ರದ ಮೊನೆಯಿಂದಲೂ ಬರೆಯಲಾಗಿದೆ. ಅದು ಅವರ ಹೃದಯದ ಹಲಗೆಯ ಮೇಲೆಯೂ ಅವರ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲಾಗಿದೆ.