Jeremiah 17:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲವು ಸಲ ಪಕ್ಷಿಯು ತಾನು ಇಡದ ಮೊಟ್ಟೆಗೆ ಕಾವು ಕೊಡುತ್ತದೆ. ಹಣಕ್ಕಾಗಿ ಮೋಸಮಾಡುವ ಮನುಷ್ಯನು ಆ ಪಕ್ಷಿಯಂತಿರುವನು, ಅವನು ತನ್ನ ಮಧ್ಯಪ್ರಾಯದಲ್ಲಿ ತನ್ನ ಹಣವನೆಐಲ್ಲಾ ಕಳೆದುಕೊಳ್ಳುವನು. ಅವನು ತನ್ನ ಅಂತ್ಯಕಾಲದಲ್ಲಿ ಮೂರ್ಖನಾಗಿ ಕಂಡುಬರುವನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು. ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.
Kannada BSI Bible 2016
ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು; ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.
Kannada Bible (KNCL) BSI 2016
ಅನ್ಯಾಯವಾಗಿ ಆಸ್ತಿಪಾಸ್ತಿಗಳನ್ನು ಗಳಿಸಿಕೊಳ್ಳುವ ಮಾನವ ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನ. ಅವು ಅವನಿಂದ ತೊಲಗಿಹೋಗುವುವು ನಡುಪ್ರಾಯದಲ್ಲಿ ಅವನು ಮೂರ್ಖನಾಗಿ ಕಂಡುಬರುವನು ಅಂತ್ಯಕಾಲದಲ್ಲಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಹಾಗೆ, ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಹಾಗೆಯೇ ಇದ್ದಾನೆ. ಅವನು ತನ್ನ ಮಧ್ಯಪ್ರಾಯದಲ್ಲಿ ಅದನ್ನು ಬಿಡುವನು. ತನ್ನ ಅಂತ್ಯದಲ್ಲಿ ಅವನು ಮೂರ್ಖನೆಂದು ಸಾಬೀತಾಗುತ್ತದೆ.