Jeremiah 17:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ನೀನು ಇಸ್ರೇಲಿನ ಆಶಾಕಿರಣ, ಯೆಹೋವನೇ, ನೀನು ಜೀವಜಲದ ಬುಗ್ಗೆಯಂತಿರುವೆ, ಯಾರಾದರೂ ಯೆಹೋವನ ಅನುಸರಣೆಯನ್ನು ತ್ಯಜಿಸಿದರೆ ಅವರ ಜೀವನ ಘಹಳ ಮೊಟಕಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು. ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು.
Kannada BSI Bible 2016
ಆದದರಿಂದ ಕರ್ತನು ಹೇಳುವದೇ ನಂದರೆ--ಅನ್ಯಜನಾಂಗಗಳಲ್ಲಿ ವಿಚಾರಿಸಿರಿ; ಇಂಥವು ಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾಭಯಂಕರವಾದದ್ದನ್ನು ಮಾಡಿದ್ದಾಳೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಇಸ್ರಾಯೇಲ್ಯರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು; ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ದೂಳಿನಲ್ಲಿ ಬರೆಯಲ್ಪಡುವದು.
Kannada Bible (KNCL) BSI 2016
ಸ್ವಾಮಿ ಸರ್ವೇಶ್ವರಾ, ನೀವು ಇಸ್ರಯೇಲರ ಆಶ್ರಯ! ನಿಮ್ಮನ್ನು ಬಿಟ್ಟುಹೋಗುವವರು ಆಶಾಭಂಗಪಡುವರು ಅವರು ಜೀವಜಲದ ಬುಗ್ಗೆಯನ್ನೆ ತೊರೆದವರು ತಮ್ಮ ಹೆಸರನ್ನು ಧೂಳಿನಲ್ಲಿ ಬರೆಸಿಕೊಂಡವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ನಿರೀಕ್ಷೆಯಾದ ಓ ಯೆಹೋವ ದೇವರೇ, ನಿಮ್ಮನ್ನು ತೊರೆದುಬಿಟ್ಟವರೆಲ್ಲರೂ ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಯೆಹೋವ ದೇವರಿಂದ ತೊಲಗಿ ಹೋದವರನ್ನು ಧೂಳಿನಲ್ಲಿ ಬರೆಯಲಾಗುತ್ತದೆ.