Jeremiah 17:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನಾನು ನಿನ್ನನ್ನು ಬಿಟ್ಟು ಓಡಿಹೋಗಲಿಲ್ಲ, ನಾನು ನಿನ್ನನ್ನು ಅನುಸರಿಸಿದೆನು. ನೀನು ಹೇಳಿದಂತೆ ನಾನು ಕುರುಘನಾದೆ. ಯೆಹೋವನೇ, ನಾನು ಹೇಳಿದ್ದೆಲ್ಲ ನಿನಗೆ ಗೊತ್ತಿದೆ. ಈಗ ನಡೆಯುತ್ತಿರುವುದನೆಐಲ್ಲ ನೀನು ನೋಡುತ್ತಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಆತುರಪಡಲಿಲ್ಲ. ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ಅದನ್ನು ನೀನೇ ಬಲ್ಲೆ. ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.
Kannada BSI Bible 2016
ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಾದರೋ ಸಭಾ ಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವದನ್ನು ಬಿಡುವದಕ್ಕೆ ಆತುರಪಡಲಿಲ್ಲ; ಅನಿವಾರ್ಯ ವಿಪತ್ತಿನ ದಿನವನ್ನು ಅಪೇಕ್ಷಿಸಲಿಲ್ಲ; ನೀನೇ ಬಲ್ಲೆ; ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.
Kannada Bible (KNCL) BSI 2016
ನಾನಾದರೋ ‘ಕೇಡನ್ನು ಬರಮಾಡಿ’ ಎಂದು ನಿಮ್ಮನ್ನು ತವಕಪಡಿಸಲಿಲ್ಲ. ಅನಿವಾರ್ಯ ವಿಪತ್ತಿನ ದಿನವನ್ನು ನಾನು ಅಪೇಕ್ಷಿಸಲಿಲ್ಲ. ಇದು ನಿಮಗೆ ತಿಳಿದ ವಿಷಯ. ನನ್ನ ಮಾತುಗಳು ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯಿಂದ ಹೊರಟವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನಾದರೋ ಸಭಾಪಾಲನೆಯಲ್ಲಿ ನಿಮ್ಮನ್ನು ಹಿಂಬಾಲಿಸುವುದನ್ನು ಬಿಡುವುದಕ್ಕೆ ಆತುರಪಡಲಿಲ್ಲ; ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ನೀವೇ ಬಲ್ಲೆ; ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.