Jeremiah 17:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ನನ್ನನ್ನು ಹಿಂಸಿಸುತ್ತಿದ್ದಾರೆ. ಆ ಜನರು ಲಜ್ಜೆಪಡುವಂತೆ ಮಾಡು. ನನ್ನನ್ನು ನಿರಾಶೆಗೊಳಿಸಙೇಡ. ಆ ಜನರಿಗೆ ಭೀತಿಯುಂಟಾಗಲಿ, ಆದರೆ ನನಗೆ ಭಯವಾಗುವಂತೆ ಮಾಡಬೇಡ. ನನ್ನ ವೈರಿಗಳಿಗೆ ಭಯಂಕರವಾದ ವಿನಾಶದ ದಿನವು ಬರುವಂತೆ ಮಾಡು. ಅವರನ್ನು ಮುರಿದುಬಿಡು, ಮತ್ತೆಮತ್ತೆ ಮುರಿದುಬಿಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ. ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನಲ್ಲ. ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತ ಕೇಡಿನಿಂದ ಅವರನ್ನು ನಾಶಪಡಿಸು.
Kannada BSI Bible 2016
ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ; ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನು ಬೇಡ; ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತಭಂಗದಿಂದ ಅವರನ್ನು ನಾಶಪಡಿಸು.
Kannada Bible (KNCL) BSI 2016
ನನಗಲ್ಲ, ನನ್ನ ಹಿಂಸಕರಿಗೆ ಅವಮಾನವಾಗಲಿ. ಭಯಭ್ರಾಂತಿ ನನ್ನನ್ನಲ್ಲ, ಅವರನ್ನು ಅಪಹರಿಸಲಿ. ಅವರಿಗೆ ಕೇಡುಗಾಲವನ್ನು ಬರಮಾಡಿ ಬೇರುಸಹಿತ ಅವರನ್ನು ನಾಶಪಡಿಸಿರಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನನ್ನು ಹಿಂಸಿಸುವವರು ನಾಚಿಕೆಗೆ ಗುರಿಯಾಗಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲು ಪಡಲಿ; ಆದರೆ ನಾನು ದಿಗಿಲು ಪಡದಿರಲಿ. ಆದರೆ ನಾನು ದಿಗಿಲು ಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡಿ. ಎರಡರಷ್ಟಾದ ನಾಶದಿಂದ ಅವರನ್ನು ನಾಶಪಡಿಸಿ.