Jeremiah 17:25 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“‘ನೀವು ಈ ಆಜ್ಞೆಯನ್ನು ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ಜೆರುಸಲೇಮಿನ ದ್ವಾರಗಳಿಂದ ಬರುತ್ತಾರೆ. ಆ ರಾಜರು ರಥಗಳಲ್ಲಿಯೂ ಅಶ್ವಾರೂಢರಾಗಿಯೂ ಬರುವರು. ಯೆಹೂದದ ಮತ್ತು ಜೆರುಸಲೇಮಿನ ಜನನಾಯಕರುಗಳು ಆ ರಾಜರ ಜೊತೆಯಲ್ಲಿ ಬರುವರು. ಜೆರುಸಲೇಮ್ ಪಟ್ಟಣದಲ್ಲಿ ಜನರು ಯಾವಾಗಲೂ ವಾಸವಾಗಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ, ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ಪಟ್ಟಣದ ಬಾಗಿಲುಗಳನ್ನು ಪ್ರವೇಶಿಸುವರು. ಇವರು, ಇವರ ಪ್ರಧಾನರು, ಯೆಹೂದದ ಜನರು, ಯೆರೂಸಲೇಮಿನ ನಿವಾಸಿಗಳು, ಎಲ್ಲರೂ ಇಲ್ಲಿ ಸೇರುವರು. ಈ ಪಟ್ಟಣವು ನಿತ್ಯವೂ ನೆಲೆಯಾಗಿರುವುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ ಪ್ರಭುಗಳೂ ರಥಾಶ್ವಗಳನ್ನೇರಿದವರಾಗಿ ಈ ಪಟ್ಟಣದ ಬಾಗಿಲುಗಳನ್ನು ಪ್ರವೇಶಿಸುವರು; ಇವರು, ಇವರ ಪ್ರಧಾನರು, ಯೆಹೂದದ ಜನರು, ಯೆರೂಸಲೇವಿುನ ನಿವಾಸಿಗಳು, ಎಲ್ಲರೂ ಇಲ್ಲಿ ಸೇರುವರು; ಈ ಪಟ್ಟಣವು ನಿತ್ಯವೂ ನೆಲೆಯಾಗಿರುವದು.
Kannada Bible (KNCL) BSI 2016
ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ ಹಾಗು ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ನಗರದ ಬಾಗಿಲುಗಳನ್ನು ಪ್ರವೇಶಿಸುವರು. ಇವರು ಮಾತ್ರವಲ್ಲ, ಇವರ ಪ್ರಧಾನರು, ಜುದೇಯದ ಜನರು, ಜೆರುಸಲೇಮಿನ ನಿವಾಸಿಗಳು ಎಲ್ಲರೂ ಇಲ್ಲಿ ಸೇರುವರು. ಈ ನಗರದಲ್ಲಿ ಜನರು ಯಾವಾಗಲು ತುಂಬಿರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನ ಸಿಂಹಾಸನದ ಮೇಲೆ ಕೂರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ, ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು, ಯೆಹೂದದ ಮನುಷ್ಯರಾಗಿಯೂ, ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು, ಅವರೂ, ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು. ಈ ಪಟ್ಟಣದಲ್ಲಿ ಎಂದೆಂದಿಗೂ ವಾಸಮಾಡಿದರು.