Jeremiah 17:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಆ ವಸ್ತುಗಳನ್ನು ಬೆಟ್ಟಗಳ ಮೇಲೆಯೂ ಬಯಲು ಪ್ರದೇಶದಲ್ಲಿಯೂ ಜ್ಞಾಪಿಸಿಕೊಳ್ಳುವರು. ಯೆಹೂದದ ಜನರಲ್ಲಿ ಭಂಡಾರಗಳಿವೆ. ನಾನು ಅವುಗಳನ್ನು ಬೇರೆಯವರಿಗೆ ಒಪ್ಪಿಸುತ್ತೇನೆ. ನಿಮ್ಮ ದೇಶದಲ್ಲಿದ್ದ ಎಲ್ಲಾ ಉನ್ನತಸ್ಥಳಗಳನ್ನು ಜನರು ನಾಶಮಾಡುವರು. ಆ ಸ್ಥಳಗಳಲ್ಲಿ ಪೂಜೆಮಾಡಿ ನೀವು ಪಾಪಕ್ಕೆ ಗುರಿಯಾಗಿರುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ, ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು.
Kannada BSI Bible 2016
ಆಗ ನಾನು ಕುಂಬಾರನ ಮನೆಗೆ ಇಳಿದುಹೋದೆನು; ಇಗೋ, ಅವನು ಚಕ್ರದ ಮೇಲೆ ಕೆಲಸಮಾಡುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೈಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತಗಳಲ್ಲಿ ನೀವು ಮಾಡಿದ ಪಾಪದ ನಿವಿುತ್ತ ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನೂ ಪೂಜಾಸ್ಥಳಗಳನ್ನೂ ಸೂರೆಗೆ ಈಡುಮಾಡುವೆನು.
Kannada Bible (KNCL) BSI 2016
ನಿಮ್ಮ ಪ್ರಾಂತ್ಯಗಳಲ್ಲೆಲ್ಲ ನೀವು ಮಾಡಿದ ಪಾಪದ ನಿಮಿತ್ತ ನಾನು ನಿಮ್ಮ ಎಲ್ಲ ಸೊತ್ತುಸಂಪತ್ತುಗಳನ್ನು ಮತ್ತು ಪೂಜಾಸ್ಥಳಗಳನ್ನು ಸೂರೆಗೆ ಈಡುಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾಡಿನಲ್ಲಿರುವ ನನ್ನ ಪರ್ವತವೇ, ನಿನ್ನ ಎಲ್ಲಾ ಪ್ರಾಂತಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಪೂಜಾಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.