Jeremiah 17:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮಗೆ ಕೊಟ್ಟ ಭೂಮಿಯನ್ನು ನೀವು ಕಳೆದುಕೊಳ್ಳುವಿರಿ. ನಿಮ್ಮನ್ನು ನಿಮಗೆ ತಿಳಿಯದ ನಾಡಿನಲ್ಲಿ ನಿಮ್ಮ ಶತ್ರುಗಳ ದಾಸರನ್ನಾಗಿ ಮಾಡುವೆನು. ಏಕೆಂದರೆ ನನಗೆ ತುಂಬಾ ಕೋಪ ಘಂದಿದೆ. ನನ್ನ ಕೋಪವು ಉರಿಯುವ ಜ್ವಾಲೆಯಂತಿದೆ; ನೀವು ಅದರಲ್ಲಿ ಭಸ್ಮವಾಗಿ ಹೋಗುವಿರಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ. ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ನೀವು ನನ್ನ ರೋಷಾಗ್ನಿಯನ್ನು ಹೆಚ್ಚಿಸಿದ್ದೀರಿ, ಅದು ನಿತ್ಯವೂ ಉರಿಯುತ್ತಿರುವುದು.
Kannada BSI Bible 2016
ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟುಹೋಯಿತು; ಆಗ ಕುಂಬಾರನಿಗೆ ಒಳ್ಳೇದೆಂದು ತೋರುವ ಪ್ರಕಾರ ಅದನ್ನು ಮತ್ತೊಂದು ಪಾತ್ರೆ ಯನ್ನಾಗಿ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮಗೆ ದಯಪಾಲಿಸಿದ ಸ್ವಾಸ್ತ್ಯವನ್ನು ಸ್ವದೋಷದಿಂದಲೇ ಕಳೆದುಕೊಳ್ಳುವಿರಿ; ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು; ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.
Kannada Bible (KNCL) BSI 2016
ನಾನು ನಿಮಗೆ ಹಕ್ಕು ಬಾಧ್ಯತೆಯಾಗಿ ದಯಪಾಲಿಸಿದ ಸೊತ್ತನ್ನು ನೀವು ದೋಷದಿಂದಲೆ ಕಳೆದುಕೊಳ್ಳುವಿರಿ. ನೀವು ನೋಡದ ನಾಡಿನಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೇ ಊಳಿಗದವರನ್ನಾಗಿ ಮಾಡುವೆನು. ನೀವು ನನ್ನ ಕೋಪಾಗ್ನಿಯನ್ನು ಹೊತ್ತಿಸಿದ್ದೀರಿ. ಅದು ನಿರಂತರವಾಗಿ ಉರಿಯುತ್ತಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಿನ್ನ ದೋಷದಿಂದಲೇ ನೀನು ನಾನು ನಿನಗೆ ಕೊಟ್ಟ ಸೊತ್ತನ್ನು ಬಿಟ್ಟು ಬಿಡುವೆ. ನಿನಗೆ ತಿಳಿಯದ ದೇಶದಲ್ಲಿ ನಿನ್ನನ್ನು ನಿನ್ನ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ಏಕೆಂದರೆ ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ. ಅದು ನಿತ್ಯವೂ ಪ್ರಜ್ವಲಿಸುತ್ತಿರುವುದು.”