Jeremiah 17:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೀಗೆ ಹೇಳಿದನು: “ಕೇವಲ ಜನರನ್ನು ನಂಬಿದವರಿಗೆ ಕೇಡಾಗುವುದು. ಮನುಷ್ಯರ ಬಲವನ್ನು ಆತುಕೊಂಡವರಿಗೆ ಕೇಡಾಗುವುದು. ಯಾಕೆಂದರೆ ಅಂಥವರು ಯೆಹೋವನಲ್ಲಿ ನಂಬಿಕೆ ಇಡುವದನ್ನು ಬಿಟ್ಟುಬಿಟ್ಟಿರುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.
Kannada BSI Bible 2016
ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೀಗನ್ನುತ್ತಾನೆ - ಮಾನವಮಾತ್ರದವರಲ್ಲಿ ಭರವಸವಿಟ್ಟು ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ತನು.
Kannada Bible (KNCL) BSI 2016
ಇವು ಸರ್ವೇಶ್ವರನ ಮಾತುಗಳು: “ಮಾನವ ಮಾತ್ರದವರಲ್ಲಿ ಭರವಸೆಯಿಟ್ಟು ನರಜನ್ಮದವರನ್ನೇ ತನ್ನ ಭುಜಬಲವೆಂದುಕೊಂಡು ಸರ್ವೇಶ್ವರನನ್ನೇ ತೊರೆಯುವಂಥ ಹೃದಯವುಳ್ಳವನು ಶಾಪಗ್ರಸ್ತನು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾನವನ ಸಾಮರ್ಥ್ಯಗಳನ್ನು ತನ್ನ ಆಧಾರವಾಗಿ ಮಾಡಿಕೊಂಡ ವ್ಯಕ್ತಿ ಶಾಪಗ್ರಸ್ತ, ಅವನು ಮನುಷ್ಯನ ಶಕ್ತಿಯ ಮೇಲೆ ಭರವಸೆ ಇಡುವನು. ಯೆಹೋವ ದೇವರ ಕಡೆಯಿಂದ ಯಾವನ ಹೃದಯವು ತೊಲಗುವುದೋ, ಅವನು ಶಾಪಗ್ರಸ್ತನು.