Jeremiah 17:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಜನರು ನಿರ್ಜನವಾದ ಪ್ರದೇಶದಲ್ಲಿದ್ದ, ಸುಡುವ ಬರಡು ಭೂಮಿಯಲ್ಲಿದ್ದ, ಘಂಜರು ಭೂಮಿಯಲ್ಲಿ ಬೆಳೆದ, ದೇವರು ನೀಡಘಹುದಾದ ಒಳ್ಳೆಯ ವಸ್ತುಗಳ ಬಗ್ಗೆ ಏನೂ ಅರಿಯದ ಒಂದು ಪೊದೆಯಂತಿರುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭ ಸಂಭವಿಸಿದರೂ ಅವನು ಅದನ್ನು ಕಾಣನು. ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು.
Kannada BSI Bible 2016
ಓ ಇಸ್ರಾಯೇಲಿನ ಮನೆತನದ ವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡ ಕೂಡದೋ ಎಂದು ಕರ್ತನು ಅನ್ನುತ್ತಾನೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭಸಂಭವಿಸಿದರೂ ಅದನ್ನು ಕಾಣನು; ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು.
Kannada Bible (KNCL) BSI 2016
ಇಂಥವನು ಅಡವಿಯಲ್ಲಿನ ಜಾಲಿಗಿಡಕ್ಕೆ ಸಮಾನನು. ಶುಭಸಂಭವಿಸಿದರೂ ಅದು ಅವನ ಕಣ್ಣಿಗೆ ಕಾಣದು. ಜನರಾರೂ ವಾಸಿಸದ ಚೌಳು ನೆಲದೊಳು ಬೆಳೆಯಿಲ್ಲದ ಬೆಂಗಾಡಿನೊಳು ವಾಸಿಸುವವನ ಪರಿಸ್ಥಿತಿ ಅವನದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅಡವಿಯಲ್ಲಿರುವ ಜಾಲಿ ಗಿಡದ ಹಾಗಿರುವನು. ಒಳ್ಳೆಯದು ಬರುವಾಗ ನೋಡದೆ ಇರುವನು. ನಿವಾಸಿಗಳಿಲ್ಲದ ಚೌಳು ನೆಲವಾಗಿರುವ ಮರುಭೂಮಿಯ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.