Jeremiah 17:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಮನುಷ್ಯನು ನೀರಿನ ಸಮೀಪದಲ್ಲಿ ನೆಟ್ಟಿರುವ, ಆಳವಾಗಿ ಙೇರೂರಿ ನೀರಿನ ಸೆಲೆಗಳನ್ನು ತಲುಪಿರುವ, ಉಷ್ಣಕ್ಕೆ ಹೆದರದ, ಯಾವಾಗಲೂ ಹಸಿರೆಲೆಗಳಿಂದ ಸೊಂಪಾದ, ಮಳೆ ಬೀಳದ ವರ್ಷದಲ್ಲಿಯೂ ಚಿಂತಿಸದ, ಯಾವಾಗಲೂ ಫಲಭರಿತವಾಗಿರುವ ಮರದಂತೆ ಇರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.”
Kannada BSI Bible 2016
ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ ದಗೆಗೆ ಭಯಪಡದೆ ಹಸುರೆಲೆಯನ್ನು ಬಿಡುತ್ತಾ ಕ್ಷಾಮ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.
Kannada Bible (KNCL) BSI 2016
ನೀರರುಗಿನಲೆ ನೆಡಲಾದ, ನದಿಯ ಬದಿಯಲೆ ಬೇರು ಹರಡಿದ ಬಿಸಿಲ ಧಗೆಗೆ ಹೆದರದ, ಬರಗಾಲದಲ್ಲೂ ನಿಶ್ಚಿಂತವಾದ ಹಸಿರೆಲೆಬಿಡುವ, ಫಲನೀಡುವ ಮರಕ್ಕೆ ಸಮಾನನು ಆತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅವನು ನೀರಿನ ಬಳಿಯಲ್ಲಿ ನೆಡಲಾದ, ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು. ಬಿಸಿಲಿನ ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ. ಬರಗಾಲದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.”