Jeremiah 18:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೆಹೂದದ ಜನರು, ‘ಪ್ರಯತಐ ಮಾಡುವದರಿಂದ ಏನೂ ಪ್ರಯೋಜನವಿಲ್ಲ. ನಮ್ಮ ಮನಸ್ಸಿಗೆ ಘಂದಂತೆ ನಾವು ಮಾಡುತ್ತಿದ್ದೇವೆ. ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ದುಷ್ಟ ಮತ್ತು ಮೊಂಡುಮನಸ್ಸು ಹೇಳಿದಂತೆ ನಡೆಯುವೆವು‘ ಎಂಬುದಾಗಿ ಉತ್ತರಿಸುವರು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರೋ, ‘ಏನೂ ನಿರೀಕ್ಷೆಯಿಲ್ಲ; ನಮ್ಮ ಆಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಟ ಹೃದಯದ ಹಾಗೆ ಮಾಡುವೆವು’ ಎಂದು ಹೇಳುತ್ತಾರೆ.”
Kannada BSI Bible 2016
ಹೀಗೆ ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ಮಾಡು ವೆನೆಂದು ಕರ್ತನು ಹೇಳುತ್ತಾನೆ; ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರೋ - ಏನೂ ನಿರೀಕ್ಷೆಯಿಲ್ಲ; ನಮ್ಮ ಆಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಟ ಹೃದಯದ ಹಾಗೆ ಮಾಡುವೆವು ಎಂದು ಹೇಳುತ್ತಾರೆ.
Kannada Bible (KNCL) BSI 2016
“ಆದರೆ ಅವರು, ‘ಇದೆಲ್ಲ ಹೇಳಿ ಏನು ಪ್ರಯೋಜನವಿಲ್ಲ; ನಾವು ನಮ್ಮ ಆಲೋಚನೆ ಪ್ರಕಾರ ನಡೆಯುತ್ತೇವೆ. ನಮ್ಮಲ್ಲಿ ಪ್ರತಿಯೊಬ್ಬರು ನಮ್ಮ ನಮ್ಮ ಹೃದಯದ ಚಟದಂತೆಯೇ ನಡೆಯುತ್ತೇವೆ’ ಎಂದು ಹೇಳುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರೋ ಏನೂ ಪ್ರಯೋಜನ ಇಲ್ಲ. ಏಕೆಂದರೆ ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು. ನಾವೆಲ್ಲರೂ ನಮ್ಮ ದುಷ್ಟ ಹೃದಯದ ಮೊಂಡುತನವನ್ನು ಅನುಸರಿಸುತ್ತೇವೆ,’ ಎಂದರು.”