Jeremiah 18:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೇಳುವದನ್ನು ಆಲಿಸಿರಿ: “ಬೇರೆ ಜನಾಂಗದ ಜನರಿಗೆ ಈ ಪ್ರಶೆಐಯನ್ನು ಕೇಳಿರಿ, ‘ಇಸ್ರೇಲ್ ಮಾಡಿದಂಥ ದುಷ್ಕೃತ್ಯಗಳನ್ನು ಬೇರೆ ಯಾರಾದರೂ ಮಾಡಿದ್ದನ್ನು ನೀವು ಎಂದಾದರೂ ಕೇಳಿದ್ದೀರಾ?’ ಇಸ್ರೇಲ್ ದೇಶವು ದೇವರ ವಧುವಿನಂತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಯೆಹೋವನು ಹೀಗೆನ್ನುತ್ತಾನೆ, “ಜನಾಂಗಗಳಲ್ಲಿ ವಿಚಾರಿಸಿರಿ, ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಯುವತಿಯು ಕೇವಲ ಅಸಹ್ಯಕಾರ್ಯವನ್ನು ಮಾಡಿದ್ದಾಳೆ.
Kannada BSI Bible 2016
ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಯೆಹೋವನು ಹೀಗನ್ನುತ್ತಾನೆ - ಜನಾಂಗಗಳಲ್ಲಿ ವಿಚಾರಿಸಿರಿ, ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಯುವತಿಯು ಕೇವಲ ಅಸಹ್ಯ ಕಾರ್ಯವನ್ನು ಮಾಡಿದ್ದಾಳೆ.
Kannada Bible (KNCL) BSI 2016
ಸರ್ವೇಶ್ವರ ಇಂತೆಂದರು: “ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆಂದು ಅನ್ಯಜನಾಂಗಗಳಲ್ಲೆ ವಿಚಾರಿಸಿರಿ. ಇಸ್ರಯೇಲೆಂಬ ಯುವತಿ ಕೇವಲ ಅಸಹ್ಯಕಾರ್ಯವನ್ನೆ ಎಸಗಿದ್ದಾಳೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ಇತರ ಜನಾಂಗಗಳಲ್ಲಿ ವಿಚಾರಿಸಿರಿ. ಇಂಥವುಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾ ಭಯಂಕರವಾದದ್ದನ್ನು ಮಾಡಿದ್ದಾಳೆ.